ರಾಜ್ಯದ ಹಲವು ಆರ್ಟಿಓ ಚೆಕ್ ಪೋಸ್ಟ್ಗಳು, ಕಚೇರಿ ಮೇಲೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿನ ಆರ್ಟಿಓ ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಆರ್ಟಿಓ ಚೆಕ್ ಪೋಸ್ಟ್ ಸಿಬ್ಬಂದಿ ವಿರುದ್ಧ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೂಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ದೂರು ಕೇಳಿಬಂದ ಆರ್ಟಿಓ ಚೆಕ್ಪೋಸ್ಟ್ಗಳ ಮೇಲೆ ಅಧಿಕಾರಿಗಳು ಇಂದು (ಅ.08) ಬೆಳ್ಳಂ ಬೆಳಗ್ಗೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬೀದರ್ ಹಾಗೂ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್, ಕಲಬುರಗಿ ಲೋಕಾಯುಕ್ತ ಡಿವೈಎಸ್ಪಿ ಗೀತಾ ಬೀದರ್ ಮತ್ತು ಡಿವೈಎಸ್ಪಿ ಹಣುಮಂತರಾಯ ನೇತೃತ್ವದ 4 ತಂಡದಿಂದ ಪರಿಶೀಲನೆ ನಡೆಯುತ್ತಿದೆ.
ಕೋಲಾರ ಜಿಲ್ಲೆಯ ಎರಡು ಆರ್ ಟಿ ಒ ಚೆಕ್ ಪೋಸ್ಟ್ ಮೇಲೆ ದಾಳಿ ಮಾಡಿದ್ದು, ಅನೇಕ ದಾಖಲಾತಿ ಹಾಗೂ ಹಣ ಪತ್ತೆಯಾಗಿದೆ. ಇದನ್ನು ವಶಪಡಿಸಿಕೊಂಡು ಲೆಕ್ಕ ಪರಿಶೀಲನೆ ಮಾಡಿ. ವಿಚರಣೆ ಹಾಗೂ ಕಾರ್ಯಚರಣೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.