ಎಲ್ಲಾ ಎಕ್ಸಿಟ್ ಫೋಲ್‌ಗಳನ್ನು ಸುಳ್ಳು ಮಾಡಿ ಹರಿಯಾಣದಲ್ಲಿ ಬಿಜೆಪಿ ಭಾರಿ ಗೆಲುವಿನತ್ತ ಸಾಗುತ್ತಿರುವ ನಡುವೆ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಮನವರಿಕೆಯ ಮಾತುಗಳನ್ನು ಹಾಡಿದ್ದಾರೆ. ಹೌದು, ಈ ಚುನಾವಣೆಯಿಂದ ಅತಿಯಾದ ಆತ್ಮವಿಶ್ವಾಸ ಹೊಂದಿರಬಾರದು ಎಂಬ ದೊಡ್ಡ ಪಾಠವನ್ನು ಕಲಿತಂತಾಗಿದೆ ಎಂದು ಹೇಳಿದ್ದಾರೆ.
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 90 ಕ್ಷೇತ್ರಗಳ ಪೈಕಿ ಎಎಪಿ 89 ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿ, ಒಂದೂ ಸ್ಥಾನವನ್ನು ಗೆಲ್ಲದೆ ವಿಫಲವಾಗಿದೆ. ಇದರ ಬೆನ್ನಲ್ಲೇ ಈಗ ಅರವಿಂದ್ ಕೇಜ್ರಿವಾಲ್ ಅವರು ಈ ಸೋಲಿನ ಹಿಂದಿರುವ ಹಲವು ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ.
ಹರಿಯಾಣದಲ್ಲಿ ಫಲಿತಾಂಶಗಳು ಏನೆಂದು ನೋಡೋಣ. ಚುನಾವಣೆಯಲ್ಲಿ ಎಂದಿಗೂ ಅತಿಯಾದ ಆತ್ಮವಿಶ್ವಾಸವನ್ನು ಹೊಂದಿರಬಾರದು ಎಂಬುದು ಇದರ ದೊಡ್ಡ ಪಾಠ. ಯಾವುದೇ ಚುನಾವಣೆಯನ್ನು ಲಘುವಾಗಿ ಪರಿಗಣಿಸಬಾರದು. ಪ್ರತಿ ಚುನಾವಣೆ ಮತ್ತು ಪ್ರತಿ ಸ್ಥಾನವು ಕಠಿಣವಾಗಿದೆ ಎಂದು ಕೇಜ್ರಿವಾಲ್ ಎಎಪಿ ಪುರಸಭೆಯ ಕೌನ್ಸಿಲರ್‌ಗಳ ಸಭೆಯಲ್ಲಿ ಹೇಳಿದ್ದಾರೆ.
ಈ ಹಿಂದೆ ದೆಹಲಿಯ ಮಾಜಿ ಮುಖ್ಯಮಂತ್ರಿ ಹರಿಯಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ಎಎಪಿ ಬೆಂಬಲವಿಲ್ಲದೆ ರಾಜ್ಯದಲ್ಲಿ ಯಾವುದೇ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದರು.