Thursday, December 12, 2024

ದರ್ಶನ್ ಜಾಮೀನು ಅರ್ಜಿ ತೀರ್ಪನ್ನು ಅ.15ಕ್ಕೆ ಕಾಯ್ದಿರಿಸಿದ ಕೋರ್ಟ್‌

Most read

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, ಪವಿತ್ರಾ ಹಾಗೂ ಇತರೆ ಕೆಲವು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆದಿದ್ದು, ದರ್ಶನ್​ರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಸಂಪೂರ್ಣ ಆಲಿಸಿದ ಕೋರ್ಟ್‌ ತೀರ್ಪನ್ನು ಅಕ್ಟೋಬರ್‌ 14ಕ್ಕೆ ಕಾಯ್ದಿರಿಸಿದೆ.

ದರ್ಶನ್ ಪರ ವಕೀಲರಾದ ಸಿವಿ ನಾಗೇಶ್,  ಎಸ್​ಪಿಪಿ ಪ್ರಸನ್ನ ಕುಮಾರ್ ಇಬ್ಬರ ವಾದ ಪ್ರತಿವಾದವನ್ನು ಆಲಿಸಿದ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಅಕ್ಟೋಬರ್ 14ಕ್ಕೆ ಕಾಯ್ದಿರಿಸಿದೆ. ಸೋಮವಾರ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.

More articles

Latest article