ಕೋವಿಡ್ ಹಗರಣ ಪರಿಶೀಲನೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚನೆ

Most read

ಕೋವಿಡ್- 19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧ ನಡೆದಿರುವ ತನಿಖೆಗೆ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ನಾ ರವರ ನೇತೃತ್ವದ ವಿಚಾರಣಾ ಆಯೋಗವು ತನ್ನ ಮೊದಲ ವರದಿಯನ್ನು ನೀಡಿದೆ. ಈ ವರದಿಯಲ್ಲಿ ಬೃಹತ್ ಪ್ರಮಾಣದ ಹಗರಣ ನಡೆದಿರುವುದಾಗಿ ಉಲ್ಲೇಖಿಸಲಾಗಿದ್ದು, ಅದರ ಕುರಿತು ಕ್ರಮ ಕೈಗೊಳ್ಳಬಹುದೆಂದು ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಿ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ.

ಗೃಹ ಸಚಿವ ಡಾ.ಜಿ. ಪರಮೇಶ್ವರ, ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ
ಸಚಿವ ಶರಣ ಪ್ರಕಾಶ್ ಪಾಟೀಲ ಅವರು ಸಚಿವ ಸಂಪುಟ ಉಪ ಸಮಿತಿಯ ಸದಸ್ಯರುಗಳಾಗಿರುತ್ತಾರೆ.

More articles

Latest article