ಜಮ್ಮು – ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹಿಂಪಡೆದ ಕೇಂದ್ರ: ಹೊಸ ಸರ್ಕಾರಕ್ಕೆ ವೇದಿಕೆ ಸಜ್ಜು

Most read

ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಕಣಿವೆಯಲ್ಲಿ 10 ವರ್ಷಗಳ ಬಳಿಕ ವಿಧಾನಸಭೆ ಚುನಾವಣೆ ನಡೆದು 49 ಸ್ಥಾನಗಳನ್ನು ಪಡೆಯುವ ಮೂಲಕ ನ್ಯಾಷನಲ್​ ಕಾನ್ಫರೆನ್ಸ್​​ ಮೈತ್ರಿಕೂಟ ಜಯಭೇರಿ ಭಾರಿಸಿದ ಬೆನ್ನಲ್ಲೇ 6 ವರ್ಷಗಳ ಬಳಿಕ ರಾಷ್ಟ್ರಪತಿ ಆಡಳಿತವನ್ನು ಹಿಂಪಡೆಯಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂತೆಗೆದುಕೊಳ್ಳಲು ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ ದೊರೆತಿದೆ. ಇದರ ನಂತರ, ರಾಷ್ಟ್ರಪತಿ ಮುರ್ಮು ಅಗತ್ಯ ಅಧಿಸೂಚನೆಯನ್ನು ಹೊರಡಿಸಿದ್ದಾರೆ.

ಕೇಂದ್ರ ಗೃಹ ಸಚಿವಾಲಯ ಭಾನುವಾರ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ. “ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 (2019 ರ 34) ಸೆಕ್ಷನ್ 73 ರ ಮೂಲಕ ನೀಡಿರುವ ಅಧಿಕಾರಗಳ ಅನುಷ್ಠಾನದಲ್ಲಿ, ಭಾರತದ ಸಂವಿಧಾನದ 239 ಮತ್ತು 239ಎ ವಿಧಿಗಳೊಂದಿಗೆ ಓದಲಾದ, ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ 31 ನೇ ಅಕ್ಟೋಬರ್, 2019 ರ ಆದೇಶವನ್ನು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 ರ ಸೆಕ್ಷನ್ 54 ರ ಅಡಿಯಲ್ಲಿ ಮುಖ್ಯಮಂತ್ರಿ ನೇಮಕದ ಮೊದಲು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ” ಎಂದು ಗೆಜೆಟ್‌ನಲ್ಲಿ ತಿಳಿಸಲಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಮಾಡಿದ್ದಾರೆ.

ಸದ್ಯ ಸರ್ಕಾರದ ರಚನೆಗೆ ಸಿದ್ಧತೆಗಳು ನಡೆಯುತ್ತಿದ್ದು, ನೂತನ ಸಿಎಂ ಹಾಗೂ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಅಕ್ಟೋಬರ್​​ 16ದಂದು ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಭಾನುವಾರ ಹಿಂಪಡೆಯಲಾಗಿದೆ.

More articles

Latest article