Thursday, December 12, 2024

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ ಘೋಷಣೆ ಮಾಡಿದ ಚುನಾವಣಾ ಆಯೋಗ

Most read

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ (Election Comission) ಘೋಷಣೆ ಮಾಡಿದ್ದು ಚುನಾವಣೆ ಪ್ರಕ್ರಿಯೆ 5 ಜನವರಿ 2025ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಹೇಳಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿದ್ದು, ಮಹಾರಾಷ್ಟ್ರದಲ್ಲಿ 9 ಕೋಟಿ 63 ಲಕ್ಷ ಮತದಾರರು ಇದ್ದಾರೆ. ಮಹಾರಾಷ್ಟ್ರದಲ್ಲಿ 1.18 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜಾರ್ಖಂಡ್ ರಾಜ್ಯದಲ್ಲಿ 2.6ಕೋಟಿ ಮತದಾರರು ಇದ್ದಾರೆ. ಜಾರ್ಖಂಡ್ ರಾಜ್ಯದಲ್ಲಿ 29562 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 20 ರಂದು ಮತದಾನ. ನವೆಂಬರ್ 23 ರಂದು ಮಹಾರಾಷ್ಟ್ರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.

ಜಾರ್ಖಂಡ್ ನ 81 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 13 ಮೊದಲನೇ ಹಂತದ ಚುನಾವಣೆ ನಡೆಯಲಿದೆ. ನವೆಂಬರ್ 20ಕ್ಕೆ ಎರಡನೇ ಹಂತದ ಚುನಾವಣೆ ನಡೆಯಲಿದೆ. 23 ನವೆಂಬರ್‌ಗೆ ಚುನಾವಣಾ ಫಲಿತಾಂಶ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.

ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನ ಮಾಡಲು ವ್ಯವಸ್ಥೆ. ಆದಿವಾಸಿಗಳು ವಾಸಿಸುವ ಪ್ರದೇಶದಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ.

More articles

Latest article