ವಯನಾಡ್ ಲೋಕಸಭಾ ಕ್ಷೇತ್ರ ಉಪಚುನಾವಣೆ; ಪ್ರಿಯಾಂಕಾ ಗಾಂಧಿ ಅಭ್ಯರ್ಥಿ

Most read

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ.


ಈ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ಈ ಕ್ಷೇತ್ರ ತೆರವಾಗಿತ್ತು. 2024ರ ಲೋಕಸಭೆ ಚುನಾವಣೆಯಲ್ಲಿ ರಾಯ್‌ಬರೇಲಿ ಹಾಗೂ ವಯನಾಡ್ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಎರಡೂ ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದರು. ನಂತರ ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ವಯನಾಡ್ ಕ್ಷೇತ್ರದಿಂದ ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಈಗಾಗಲೇ ಪ್ರಕಟಿಸಿದೆ. ಈ ಮೂಲಕ 52 ವರ್ಷದ ಪ್ರಿಯಾಂಕಾ ಗಾಂಧಿ ತಮ್ಮ ಚೊಚ್ಚಲ ಚುನಾವಣೆಗೆ ತಯಾರಾಗುತ್ತಿದ್ದಾರೆ. ಅವರೂ ಗೆಲುವು ಸಾಧಿಸಿದರೆ ಗಾಂಧಿ ಕುಟುಂಬದಿಂದ ಮೂವರು ಸಂಸತ್ತಿಗೆ ಪ್ರವೇಶಿಸಿದಂತಾಗುತ್ತದೆ. ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜಸಭೆಗೆ ಆಯ್ಕೆಯಾಗಿದ್ದಾರೆ.

ಕಳೆದ ಚುನಾವಣೆಯಲ್ಲಿ ವಯನಾಡ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರು ತಮ್ಮ ಸಮೀಪದ ಸ್ಪರ್ಧಿ ಸಿಪಿಐನ ಅನ್ನಿ ರಾಜಾ ವಿರುದ್ಧ 3.64 ಲಕ್ಷಗಳ ಮತಗಳ ಅಂತರದಿಂದ ಗೆದ್ದಿದ್ದರು. ಕೇರಳ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ 1.3 ಲಕ್ಷ ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದರು.

More articles

Latest article