ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

Most read

ಇಂದು ಮಧ್ಯಾಹ್ನ ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ ಆಕಾಶ್ ಏರ್ ಲೈನ್ಸ್ ವಿಮಾನಕ್ಕೆ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆಯ ಸಂದೇಶ ಬಂದ ಹಿನ್ನೆಲೆಯಲ್ಲಿ ಈ ವಿಮಾನವನ್ನು ಪುನಃ ದೆಹಲಿಗೆ ಹಿಂತಿರುಗಿಸಲಾಗಿದೆ.
180 ಪ್ರಯಾಣಿಕರಿದ್ದ QP1335 ವಿಮಾನವು ದೆಹಲಿಯಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ತಿಳಿದು ಬಂದಿದೆ.

ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು. ಈ ವಿಮಾನ ದೆಹಲಿಯಿಂದ ಮಧ್ಯಾಹ್ನ 12.15ಕ್ಕೆ ಹೊರಟಿತ್ತು. ಬಾಂಬ್ ಬೆದರಿಕೆ ಕರೆ ಬರುತ್ತಿದ್ದಂತೆ ಮತ್ತೆ ದೆಹಲಿಗೆ ಹಿಂತಿರುಗಿ ಯಲ್ಲಿ 1.45 ಗಂಟೆಗೆ ಲ್ಯಾಂಡ್ ಆಗಿದೆ. ವಿಮಾನದಲ್ಲಿ ತಪಾಸಣೆಯನ್ನೂ ನಡೆಸಲಾಗಿದ್ದು ಯಾವುದೇ ರೀತಿಯ ಬಾಂಬ್ ಪತ್ತೆಯಾಗಿಲ್ಲ. ಎಲ್ಲ ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ ಎಂದು ಆಕಾಶ್ ಸಂಸ್ಥೆ ತಿಳಿಸಿದೆ.


ಕಳೆದ ಮೂರು ದಿನಗಳಿಂದ ಆಕಾಶ್ ಸೇರಿದಂತೆ 11 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಮೂರು ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳಾದ ಏರ್ ಇಂಡಿಯಾದ ಒಂದು ಮತ್ತು ಇಂಡಿಗೋದ ಎರಡು ವಿಮಾನಗಳಿಗೆ ಬಾಂಬ್ ಬೆರಿಕೆ ಕರೆ ಬಂದಿತ್ತು. ಉಳಿದಂತೆ ದೇಶದ ವಿವಿಧ ನಗರಗಳಿಗೆ ಸಂಚರಿಸುತ್ತಿದ್ದ ಸ್ಪೈಸ್ ಜೆಟ್, ಇಂಡಿಗೋ, ಆಕಾಶ್ ಏರ್ ಲೈನ್ಸ್ ವಿಮಾನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಈ ಬೆದರಿಕೆಯ ಸಂದೇಶಗಳೆಲ್ಲವೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿದ್ದವು.

More articles

Latest article