ಎನ್ ಡಿಎ ಕೂಟವೇ ನನ್ನ ಕುಟುಂಬ : ಹೆಚ್.ಡಿ. ಕುಮಾರಸ್ವಾಮಿ

Most read

ಎನ್ ಡಿಎ ಕೂಟವೇ ನನ್ನ ಕುಟುಂಬ, ಮೈತ್ರಿಕೂಟದಿಂದಲೇ ಒಬ್ಬರು ಅಭ್ಯರ್ಥಿ ಆಗುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಅವರು, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಮ್ಮ ಕುಟುಂಬದಿಂದ ಅಭ್ಯರ್ಥಿ ಹಾಕುತ್ತೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಎನ್ ಡಿಎ ಕೂಟವೇ ನನ್ನ ಕುಟುಂಬ, ಮೈತ್ರಿಕೂಟದಿಂದಲೇ ಒಬ್ಬರು ಅಭ್ಯರ್ಥಿ ಆಗುತ್ತಾರೆ ಎಂದರು.

ಯೋಗೇಶ್ವರ್ ತಾವೇ ಅಭ್ಯರ್ಥಿ ಎಂದು ಹೇಳುತ್ತಿದ್ದಾರೆ ಎನ್ನುವ ಮತ್ತೊಂದು ಪ್ರಶ್ನೆಗೆ, ಎಲ್ಲವನ್ನೂ ಮೈತ್ರಿ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ. ಜೆಡಿಎಸ್ ಬಿಜೆಪಿ ನಾಯಕರು ಸೇರಿ ನಿರ್ಧಾರ ಮಾಡುತ್ತೇವೆ. ಬಿಜೆಪಿ – ಜೆಡಿಎಸ್ ಎಲ್ಲ ನನ್ನ ಕುಟುಂಬವೇ. ಎನ್ ಡಿಎ ಅಭ್ಯರ್ಥಿ ಗೆಲ್ಲಬೇಕಷ್ಟೇ, ಇದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಕುಮಾರಸ್ವಾಮಿ ಅವರು ಹೇಳಿದರು.

More articles

Latest article