Wednesday, December 11, 2024

23 ರಂದು ಎಲ್ಲಾ ಹಂತಗಳ ನೀರು ಪೂರೈಕೆಯಲ್ಲಿ ವ್ಯತ್ಯಯ: ಜಲ ಮಂಡಳಿ ಸೂಚನೆ

Most read

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಯ ಚಾಲನೆಯ ನಂತರದ ಎಲೆಕ್ಟ್ರಿಕಲ್ ಸಂಬಂಧಿತ ಕೆ.ಪಿ.ಟಿ.ಸಿ.ಎಲ್ ಕಾಮಗಾರಿಗಳನ್ನು ಕೈಗೊಳ್ಳಲು ತಾತಗುಣಿ ಮತ್ತು ಹಾರೋಹಳ್ಳಿಯಲ್ಲಿರುವ 220 ಕೆ.ವಿ. ವಿದ್ಯುತ್ ಉಪ ಕೇಂದ್ರಗಳನ್ನು ದಿ:23-10-2024 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಒಟ್ಟು 6 ಗಂಟೆಗಳ ಕಾಲ ಎಲ್ಲಾ ಹಂತಗಳನ್ನು ಸ್ಥಗಿತಗೊಳಿಸುತ್ತಿರುವ ಹಿನ್ನಲೆಯಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಲು ಹಾಗೂ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಜಲ ಮಂಡಳಿ ಕೋರಿದೆ.

More articles

Latest article