ಪುಣೆ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ

ಪುಣೆಯ ಮಂಡೈ ಮೆಟ್ರೋ ನಿಲ್ದಾಣದ ನೆಲ ಅಂತಸ್ತಿನಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಸಾವು ನೋವು ಸಂಭವಿಸಿಲ್ಲ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿ ಸೋಮವಾರ ತಿಳಿಸಿದ್ದಾರೆ.

ಅಗ್ನಿಶಾಮಕ ದಳದ ಪ್ರಕಾರ, ವೆಲ್ಡಿಂಗ್ ಕೆಲಸ ಮಾಡುವಾಗ ಬೆಂಕಿಯ ಕಿಡಿ ಯಾವುದೋ ವಸ್ತುವಿಗೆ ತಗುಲಿ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಘಟನೆ ಬಗ್ಗೆ ತಿಳಿದ ಬೆನ್ನಲ್ಲೇ 5 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಈ ಬೆಂಕಿ ಅವಘಡದಿಂದ ಯಾರಿಗೂ ತೊಂದರೆಯಾಗಿಲ್ಲ ಹಾಗೂ ಮೆಟ್ರೋ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ ಎಂದು ಸರ್ಕಾರ ತಿಳಿಸಿದೆ.

More articles

Latest article

Most read