ಮೈಸೂರು: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸೇಡಿನ ರಾಜಕಾರಣ ವಿಪರೀತವಾಗಿದೆ. ವಿಪಕ್ಷಗಳ ಮುಖಂಡರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ, ತನಿಖಾ ಸಂಸ್ಥೆಗಳನ್ನು ಛೂ ಬಿಟ್ಟು ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಆಪಾದಿಸಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 501.81 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಕರ್ನಾಟಕದಲ್ಲೂ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ತನಿಖೆಯ ನೆಪದಲ್ಲಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವ ಪ್ರಯತ್ನ ನಡೆಯುತ್ತಿದೆ. ಇದು ಕೇವಲ ಸಿದ್ದರಾಮಯ್ಯ ಅವರ ಪ್ರಶ್ನೆಯಲ್ಲ. ಇಂದು ಕಾಂಗ್ರೆಸ್ ಪಕ್ಷಕ್ಕೆ ಆಗಿದ್ದು, ಭವಿಷ್ಯದಲ್ಲಿಎಲ್ಲ ವಿರೋಧ ಪಕ್ಷಗಳಿಗೂ ಆಗಬಹುದು. ಹೀಗೆ ನಡೆಯುತ್ತಾ ಹೋದರೆ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಅವರು ಎಚ್ಚರಿಸಿದರು.