ಯೋಗೇಶ್ವರ್ 50 ಸಾವಿರ ಮತಗಳಿಂದ ಗೆಲ್ಲಬೇಕು: ಸಿದ್ದರಾಮಯ್ಯ ಕರೆ

Most read

ಚನ್ನಪಟ್ಟಣ : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಅವರು ಇಂದು ಚನ್ನಪಟ್ಟಣದಲ್ಲಿ ನಡೆದ ಬೃಹತ್ ರೋಡ್ ಶೋನಲ್ಲಿ ಭಾಗವಹಿಸಿ ಮಾತನಾಡಿದರು. ಯೋಗೇಶ್ವರ್ ಕೆರೆಗಳಿಗೆ ಜೀವದಾನ ಮಾಡಿದ್ದಾರೆ. ಅವರು ಸದಾ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದು ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಯೋಗೇಶ್ವರ್ ಅವರನ್ನು ಗೆಲ್ಲಿಸುವ ಮೂಲಕ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿ ಎಂದು ಮತದಾರರಿಗೆ ಕರೆ ನೀಡಿದರು.

ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ, ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೇಶ್ವರ್ ಅವರೇ ಭರ್ಜರಿ ಜಯಗಳಿಸುವುದು ಖಚಿತ ಎಂದರು. ನಮ್ಮದು ಜನಕಲ್ಯಾಣದ ಸರ್ಕಾರ. ಈ ಸರ್ಕಾರದಲ್ಲಿ ಯೋಗೀಶ್ವರ್ ಅವರು ಇರಬೇಕು. ಕುಮಾರಸ್ವಾಮಿಯವರು ಶಾಸಕರಾಗಿ, ಮುಖ್ಯಮಂತ್ರಿ ಆಗಿದ್ದಾಗಲೂ ಮಾಡದ ಚನ್ನಪಟ್ಟಣದ ಅಭಿವೃದ್ಧಿ ಕೆಲಸಗಳು ಮುಂದಿನ ತಿಂಗಳಿನಿಂದ ಶಾಸಕರಾಗಿ ಯೋಗೇಶ್ವರ್ ಅವರು ಮುಂದುವರೆಸುತ್ತಾರೆ. ನಾಮಪತ್ರ ಸಲ್ಲಿಕೆ ಬಳಿಕ ನಾನು ಮತ್ತೆ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಬರುತ್ತೇನೆ ಎಂದರು.


ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಮಾಜಿ ಸಚಿವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಮಾಜಿ ಸಂಸದರಾದ ಡಿ.ಕೆ.ಸುರೇಶ್ ಸೇರಿ ಹತ್ತಕ್ಕೂ ಹೆಚ್ಚು ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

More articles

Latest article