ಚನ್ನಪಟ್ಟಣ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಗುರುವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ ಹಾಜರಿದ್ದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಕಾಂಗ್ರೆಸ್ ಭರ್ಜರಿ ರೋಡ್ ಶೋ ಹಮ್ಮಿಕೊಂಡಿತ್ತು. ಮೆರವಣಿಗೆಯಲ್ಲಿ ಹಲವಾರು ಸಚಿವರು, ಶಾಸಕರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು. ರೋಡ್ ಶೋದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

More articles

Latest article

Most read