​ಚನ್ನಪಟ್ಟಣ | ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಘೋಷಿಸಿಕೊಂಡ ಆಸ್ತಿ ಎಷ್ಟು ಗೊತ್ತೇ? ಇಲ್ಲಿದೆ ವಿವರ

Most read

ಮೊದಲಿನಿಂದಲೂ ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಚನ್ನಪಟ್ಟಣವನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಡಿಕೆ ಬ್ರದರ್ಸ್‌ ಸಿಪಿ ಯೋಗೇಸ್ವರ್‌ ಅನ್ನು ಕಣಕ್ಕಿಳಿಸಿದ್ದಾರೆ. ಸದ್ಯ ಜೆಡಿಎಸ್ ಕೋಟೆಯಲ್ಲಿ‌ ದಳಪತಿಗಳನ್ನು ಕಟ್ಟಿ ಹಾಕಲು ಕಾಂಗ್ರೆಸ್ ಮುಂದಾಗಿದೆ. ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಇಂದು ನಾಮಿನೇಷನ್ ಸಲ್ಲಿಸಿದ್ದಾರೆ. ನಗದು, ಹೂಡಿಕೆ ಸೇರಿದಂತೆ 7,25,20,470 ರೂ. ಮೌಲ್ಯದ ಚರಾಸ್ತಿ ಹೊಂದಿರುವುದಾಗಿ ಸಿ.ಪಿ.ಯೋಗೇಶ್ವರ್ ಪ್ರಮಾಣ ಪತ್ರದಲ್ಲಿ ತಮ್ಮ ಆಸ್ತಿ ವಿವರ ನೀಡಿದ್ದಾರೆ.

ಯಾರ್‌ ಯಾರ್‌ ಹೆಸರಲ್ಲಿ ಎಷ್ಟು ಆಸ್ತಿ? ನಾಮಪತ್ರದಲ್ಲಿ ಏನಿದೆ?

  • ಸಿ.ಪಿ.ಯೋಗೇಶ್ವರ್ ಹೆಸರಿನಲ್ಲಿ ಒಟ್ಟು 27,94,06,412 ಮೌಲ್ಯದ ಸ್ಥಿರಾಸ್ತಿ ಇದ್ದು, ಪತ್ನಿ ಶೀಲಾ ಹೆಸರಲ್ಲಿ 25,35,37,740 ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.

  • ಪತ್ನಿ ಶೀಲಾ ಹೆಸರಿನಲ್ಲಿ 7,10,80,556 ರೂ. ಮೌಲ್ಯದ ಚರಾಸ್ತಿ ಹೊಂದಿದ್ದು, ಶೇಷಗಿರಿಹಳ್ಳಿ, ಕೋತನಹಳ್ಳಿ, ಕೆಂಜಿಗರಹಳ್ಳಿ, ಕೇತೋಹಳ್ಳಿ, ಹಂಪಾಪುರ ಗ್ರಾಮದಲ್ಲಿ ಸಿ.ಪಿ.ಯೋಗೇಶ್ವರ್ ಸ್ಥಿರಾಸ್ತಿ ಹೊಂದಿದ್ದಾರೆ.

  • ಯೋಗೇಶ್ವರ್ ಹೆಸರಲ್ಲಿ 22,02,47,157 ರೂ. ಮೌಲ್ಯದ ಮತ್ತು ಪತ್ನಿ ಶೀಲಾ ಹೆಸರಿನಲ್ಲಿ 2,14,52,740 ರೂ. ಮೌಲ್ಯದ ಕೃಷಿ ಭೂಮಿ ಹೊಂದಿದ್ದಾರೆ.

  • ಶೀಲಾ ಹೆಸರಿನಲ್ಲಿ 6.65 ಕೋಟಿ ರೂ. ಮೌಲ್ಯದ ಕೃಷಿಯೇತರ ಭೂಮಿ ಇದೆ.

  • ಸಿ.ಪಿ.ಯೋಗೇಶ್ವರ್ ಹೆಸರಿನಲ್ಲಿ 2,37,62,000 ಕೋಟಿ ರೂ. ಮೌಲ್ಯದ ಮತ್ತು ಶೀಲಾ ಹೆಸರಿನಲ್ಲಿ 15.45 ಕೋಟಿ ರೂ. ಮೌಲ್ಯದ ಮನೆಗಳಿವೆ.

  • ಯೋಗೇಶ್ವರ್ ಹೆಸರಲ್ಲಿ 25,86,31,284 ರೂ. ಸಾಲವಿದ್ದು, ಶೀಲಾ ಹೆಸರಿನಲ್ಲಿ 3,41,42,184 ರೂ. ಸಾಲವಿದೆ.

  • 250 ಗ್ರಾಂ ಚಿನ್ನಾಭರಣವನ್ನು ಯೋಗೇಶ್ವರ್​ ಹೊಂದಿದ್ದು, ಶೀಲಾ ಬಳಿ 1 ಕೆಜಿ 500 ಗ್ರಾಂ ಚಿನ್ನಾಭರಣ, 20 ಕೆಜಿ ಬೆಳ್ಳಿ ಇದೆ. ಸಾರ್ವಜನಿಕರಿಂದ 1 ಕೆಜಿ ಚಿನ್ನ, 50 ಕೆಜಿ ಬೆಳ್ಳಿಯನ್ನು ಶೀಲಾ ಸ್ವೀಕರಿಸಿದ್ದಾರೆ.

ಇಂದು ಚನ್ನಪಟ್ಟಣ ಉಪಚುನಾವಣೆ ನಿಮಿತ್ತ ಚನ್ನಪಟ್ಟಣ ತಹಶೀಲ್ದಾರ್ ರವರ ಕಚೇರಿಯಲ್ಲಿ ಇಂದು ತಮ್ಮ ಪಕ್ಷದ ಅಭ್ಯರ್ಥಿಯಾದ ಸಿ ಪಿ ಯೋಗೇಶ್ವರ್ ರವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಮಾಜಿ ಸಚಿವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಮಾಜಿ ಸಂಸದರಾದ ಡಿ.ಕೆ.ಸುರೇಶ್ ಸೇರಿ ಹತ್ತಕ್ಕೂ ಹೆಚ್ಚು ಮಂದಿ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

More articles

Latest article