ಮೈಸೂರು ಅರಮನೆ ಪ್ರವೇಶ ಶುಲ್ಕ ಇನ್ನು ದುಬಾರಿ

Most read

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆಗೆ ಪ್ರತಿದಿನ ದೇಶ ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಇದೀಗ ಅರಮನೆಯ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗಿದೆ.

ಸಂಖ್ಯೆಯಲ್ಲಿ ಅರಮನೆ ವೀಕ್ಷಣೆಗಾಗಿ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಅರಮನೆಯ ಒಳಾವರಣದಲ್ಲಿ ಬರುವ ಚಪ್ಪಲಿ ಸ್ಟಾಂಡ್, ಲಗ್ಗೇಜ್ ಕೊಠಡಿ ಮತ್ತು ಶೌಚಾಲಯಗಳನ್ನು ಪ್ರವಾಸಿಗರಿಗೆ ಉಚಿತಗೊಳಿಸಿ, ಅರಮನೆಯ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗಿದೆ.

ವಯಸ್ಕರಿಗೆ ರೂ.120, 10 ರಿಂದ 18 ವರ್ಷದೊಳಗಿನ ಮಕ್ಕಳಿಗೆ 70 ರೂ. ನಿಗದಿಯಾಗಿದೆ. 10 ವರ್ಷದೊಳಗಿನ ಮಕ್ಕಳಿಗೆ ಪ್ರವೇಶ ಉಚಿತವಾಗಿರುತ್ತದೆ.

ಶೈಕ್ಷಣಿಕ ಪ್ರವಾಸ ಕೈಗೊಳ್ಳುವ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ದರ 50 ರೂ. ಹಾಗೂ ವಿದೇಶಿ ಪ್ರವಾಸಿಗರಿಗೆ 1000 ರೂ. ಶುಲ್ಕವನ್ನು ನಿಗಧಿ ಮಾಡಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕರು ತಿಳಿಸಿದ್ದಾರೆ.

ಅರಮನೆಯ ಆವರಣದಲ್ಲಿ ಚಪ್ಪಲಿ ಸ್ಟಾಂಡ್, ಲಗ್ಗೇಜ್ ಕೊಠಡಿ ಮತ್ತು ಶೌಚಾಲಯಗಳನ್ನು ಪ್ರವಾಸಿಗರು ಉಚಿತವಾಗಿ ಬಳಸಬಹುದಾಗಿದೆ.

More articles

Latest article