ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿರುವಂತಹ ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದೆ.
ಈ ವಿಷಯ ತಿಳಿದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು, ಈ ನಕಲಿ ಖಾತೆಯಿಂದ ಬರುವ ಯಾವುದೇ ಮನವಿಯನ್ನು ಸ್ವೀಕರಿಸದಂತೆ ಸೂಚನೆ ನೀಡಿದ್ದಾರೆ.
ಈಗಾಗಲೇ ಈ ಬಗ್ಗೆ ದೂರು ದಾಖಲಿಸುವುದಾಗಿ ಅವರು ಹೇಳಿದ್ದಾರೆ.