ಆಂಧ್ರದ ತಿರುಪತಿ ಇಸ್ಕಾನ್ ದೇಗುಲಕ್ಕೆ ಸೋಮವಾರ ಮತ್ತೆ ಬಾಂಬ್ ಬೆದರಿಕೆ ಬಂದಿದ್ದು, ಕೇವಲ 3 ದಿನಗಳ ಅಂತರದಲ್ಲಿ 4ನೇ ಬಾರಿಗೆ ಬೆದರಿಕೆ ಇ-ಮೇಲ್ ಬಂದಿದೆ.
ಇಸ್ಕಾನ್ ದೇವಸ್ಥಾನಕ್ಕೆ ಮತ್ತೊಂದು ಬಾಂಬ್ ಬೆದರಿಕೆಯೊಂದು ಬಂದಿದ್ದು, ಭಾನುವಾರ (ಅ.27) ತಡರಾತ್ರಿ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದ ಭದ್ರತೆಯನ್ನು ಹೆಚ್ಚಿಸಲಾಗಿದೆ.
‘ಪಾಕಿಸ್ತಾನದ ಐಎಸ್‌ಐ ಸಂಘಟನೆಯ ಉಗ್ರರು ದೇವಾಲಯವನ್ನು ಸ್ಫೋಟಿಸಲಿದ್ದಾರೆ’ ಎಂದು ಹೇಳುವ ಇಮೇಲ್ ಒಂದು ದೇವಸ್ಥಾನದ ಸಿಬ್ಬಂದಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಬ್ ಬೆದರಿಕೆ ಬಂದಿರುವ ಮಾಹಿತಿ ಸಿಕ್ಕಿದ ಕೂಡಲೇ ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್) ಮತ್ತು ಶ್ವಾನ ದಳದ ತಂಡಗಳು ದೇವಸ್ಥಾನಕ್ಕೆ ಆಗಮಿಸಿ ದೇವಾಲಯದಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಆದರೆ, ದೇವಸ್ಥಾನದ ಆವರಣದಲ್ಲಿ ಯಾವುದೇ ಸ್ಫೋಟಕ ಸೇರಿದಂತೆ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.