ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜ.22ರಂದು ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗೆ ಆದೇಶಿಸಿದ್ದು, ಪೂಜೆಗೆ ಯಾವುದೇ ರೀತಿಯ ಭಂಗ ಬರದಂತೆ ಕಟ್ಟೆಚ್ಚರ ವಹಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಯಾವುದ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರಿಗೆ ಬರುತ್ತಿರುವ ಮೋದಿಯವರಿಗೆ ಸ್ವಾಗತ ಕೋರುವುದಾಗಿ ಹೇಳಿದ ಅವರು,ಕರ್ನಾಟಕಕ್ಕೆ ಇನ್ನೂ GST ಪರಿಹಾರದ ಹಣ ಬಿಡುಗಡೆ ಮಾಡಿಲ್ಲ. ಗೃಹ ಸಚಿವ ಪರಮೇಶ್ವರ್ ಲೇವಡಿ. ಬರ ಪರಿಹಾರ, ವಿಶೇಷ ಅನುದಾನ ಕೊಟ್ಟಿಲ್ಲ. ಬರದಿಂದ 36ಸಾವಿರ ಕೋಟಿ ನಷ್ಟ ಆಗಿದೆ. 17 ಸಾವಿರ ಕೋಟಿ ಬರ ಪರಿಹಾರ ಕೇಳಿದ್ದೇವೆ. ಕೇಂದ್ರದಿಂದ ನಮಗೆ ಇನ್ನೂ ಪರಿಹಾರ ಬಂದಿಲ್ಲ ಎಂದು ಪರಮೇಶ್ವರ್ ಕಿಡಿ ಕಾರಿದರು.
ಹಾನಗಲ್ ಮಹಿಳೆ ಮೇಲೆ ಗ್ಯಾಂಗ್ ರೇಪ್ ಕೇಸ್ ಸಂಬಂಧ ನಾಳೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಭಟನೆ ಮಾಡೋದು ಬಿಜೆಪಿಯವರ ಹಕ್ಕು. ಗ್ಯಾಂಗ್ ರೇಪ್ ಆರೋಪಿಗಳನ್ನು ಬಂಧಿಸಿದ್ದೇವೆ. ಪ್ರಕರಣವನ್ನು ತಾರ್ಕಿಕ ಅಂತ್ಯ ಕಾಣಿಸುತ್ತೇವೆ ಎಂದು ಹೇಳಿದರು.