ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರು ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ಪರಿಶಿಷ್ಟ ಜಾತಿ (ಎಸ್ಸಿ) ಗಳ ಒಳಮೀಸಲಾತಿಯನ್ನು ಜಾರಿಗೆ ತರುತ್ತೇವೆ ಎಂದು ಹೇಳಿ ರಾಜಕೀಯಕ್ಕೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದ್ದಾರೆ
‘ಕಾಂಗ್ರೆಸ್ ಪಕ್ಷವು ಒಳಮೀಸಲಾತಿಯ ಬಗ್ಗೆ ಗಂಭೀರವಾಗಿ ಚಿಂತಿಸಿದ್ದರೆ, ಕಾಂತರಾಜ್ ವರದಿ ಅನುಷ್ಟಾನದ ಬಗ್ಗೆ ಹಿಂದೆಯೇ ಕ್ರಮ ಕೈಗೊಳ್ಳುತ್ತಿದ್ದರು, ಆದರೆ ರಾಜಕೀಯ ಲಾಭ ಪಡೆಯುವ ದೃಷ್ಟಿಯಿಂದ ಒಳಮೀಸಲಾತಿಯನ್ನು ಅನುಷ್ಟಾನ ಮಾಡಲು ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಹೇಳುತ್ತಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸೋಮವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ನಡುವೆ ಒಳಮೀಸಲಾತಿ ನೀಡಲು ಕಾಂಗ್ರೆಸ್ ಪಕ್ಷವು ಒಪ್ಪಿಗೆ ನೀಡಿದೆ ಮತ್ತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಪ್ರಾಯೋಗಿಕ ದತ್ತಾಂಶವನ್ನು ಸಂಗ್ರಹಿಸಲು ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ.