ಬೆಂಗಳೂರು:
ದೀಪಾವಳಿ ಅಂಗವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸಾರ್ವಜನಿಕರಿಗೆ ನೀಡಿರುವ ಸಲಹೆ ಮತ್ತು ಸೂಚನೆಗಳು ಹೀಗಿವೆ. ಅವುಗಳನ್ನು ಅನುಸರಿಸಿ ಸುರಕ್ಷಿತವಾಗಿ ದೀಪಾವಳಿ ಆಚರಣೆ ಮಾಡಲು ಮನವಿ ಮಾಡಲಾಗಿದೆ
- ಹಸಿರು ಪಟಾಕಿಗಳನ್ನು ಖರೀದಿಸಿ, ಪರಿಸರ ಸ್ನೇಹಿ ದೀಪಾವಳಿಯನ್ನು ಆಚರಿಸಿ.
- ಹಸಿರು ಪಟಾಕಿಗಳನ್ನು ಖರೀದಿಸುವಾಗ ಅದರ ಮೇಲಿರುವ ಕ್ಯೂಆರ್‌ಕೋಡ್ ಸ್ಕ್ಯಾನ್ ಮಾಡಿ ಖಚಿತ ಪಡಿಸಿಕೊಳ್ಳಿ.
- ಉತ್ತಮ ಗುಣಮಟ್ಟದ ಪಟಾಕಿಗಳನ್ನು ಅಧಿಕೃತವಾಗಿ ಪರವಾನಿಗೆ ಪಡೆದ ಅಂಗಡಿ ಮಳಿಗೆಗಳಿಂದ ಖರೀದಿಸಿ ಹಾಗೂ
ಲೈಸೆನ್ಸ್‌ಗಳನ್ನು ಅಂಗಡಿಗಳಲ್ಲಿ ಪ್ರದರ್ಶಿಸಿರುವುದನ್ನು ಖಚಿತ ಪಡಿಸಿಕೊಂಡು ಪಟಾಕಿಗಳನ್ನು ಖರೀದಿಸುವುದು. - ಅನಧಿಕೃತ ಅಂಗಡಿ ಗಳಿಂದ ಪಟಾಕಿಗಳನ್ನು ಖರೀದಿಸಬೇಡಿ. ಅತಿ ಹೆಚ್ಚು ಶಬ್ಧ ಹಾಗೂ ವಾಯುಮಾಲಿನ್ಯ ಉಂಟು ಮಾಡುವ ಪಟಾಕಿಗಳನ್ನು ಖರೀದಿ ಮಾಡಬೇಡಿ.
- ಹಳೆಯ ಹಾಗೂ ಹಾಳಾದ ಪಟಾಕಿಗಳನ್ನು ಕೊಂಡುಕೊಳ್ಳಬಾರದು ಮತ್ತು ಅವುಗಳನ್ನು ಬಳಸದಂತೆ ಮಕ್ಕಳಿಗೆ ಸೂಕ್ತ ತಿಳುವಳಿಕೆ ನೀಡಿ. ಪಟಾಕಿಗಳನ್ನು ಚಿಕ್ಕ ಮಕ್ಕಳು ಹಚ್ಚಲು ಅವಕಾಶ ಮಾಡಿಕೊಡಬೇಡಿ. ಚಿಕ್ಕ ಮಕ್ಕಳೊಂದಿಗೆ ಅವರ ಪೋಷಕರೂ ಸಹ ಜೊತೆಯಲ್ಲಿದ್ದು, ಸುರಕ್ಷಿತವಾಗಿ ಪಟಾಕಿ ಹಚ್ಚುವಂತೆ ಗಮನ ಹರಿಸಬೇಕು.
- ಚಿಕ್ಕಮಕ್ಕಳು ಹೆಚ್ಚು ಅಪಾಯಕಾರಿಯಾದ ಪಟಾಕಿಗಳನ್ನು ಹಚ್ಚದಂತೆ ನೋಡಿಕೊಳ್ಳುವುದು. ಪಟಾಕಿಗಳನ್ನು ಹಚ್ಚುವಾಗ ದೂರದಲ್ಲಿ ನಿಂತು ನೋಡುವಂತೆ ವ್ಯವಸ್ಥೆ ಮಾಡುವುದು. ಚಿಕ್ಕ ಮಕ್ಕಳು ಪಟಾಕಿ ಹಚ್ಚುವಾಗ ಉದ್ದನೆಯ ಊದುಬತ್ತಿಗಳನ್ನು ಬಳಸುವಂತೆ ಮಕ್ಕಳಿಗೆ ಸೂಚನೆಗಳನ್ನು ನೀಡುವುದು ಮತ್ತು ಮಕ್ಕಳ ಮೇಲೆ ನಿಗಾ ವಹಿಸುವುದು.
- ಜನನಿಬಿಡ ಪ್ರದೇಶಗಳಲ್ಲಿ, ಮುಖ್ಯ ರಸ್ತೆಗಳಲ್ಲಿ ಹಾಗೂ ವಾಹನಗಳನ್ನು ಪಾರ್ಕಿಂಗ್ ಮಾಡಿರುವ ಸ್ಥಳಗಳಲ್ಲಿ ಪಟಾಕಿಗಳನ್ನು ಸಿಡಿಸಬಾರದು. ಪಟಾಕಿಗಳನ್ನು ತೆರದ ಮೈದಾನಗಳಲ್ಲಿ ಜನಜಂಗುಳಿ ಕಡಿಮ ಇರುವ ಪ್ರದೇಶಗಳಲ್ಲಿ ಸುರಕಿತ ಕ್ರಮಗಳನ್ನು
ಆನುಸರಿಸಿಕೊಂಡು ಪಟಾಕಿಗಳನ್ನು ಹಚ್ಚುವುದು ಒಳ್ಳೆಯ ಬೆಳವಣಿಗೆಯಾಗಿರುತ್ತದೆ. - ಸೂಕ್ಷ್ಮ ಪ್ರದೇಶಗಳಾದ ಆಸತ್ರೆ ಪೆಟ್ರೋಲ್ ಬಂಕ್, ಆನಿಲ ಕೇಂದ್ರಗಳು ಧಾರ್ಮಿಕ ಸ್ಥಳಗಳು, ವೃದ್ಧಾಶ್ರಮ, ಶಿಶುಪಾಲನಾ ಕೇಂದ್ರಗಳ ಸುತ್ತ-ಮುತ್ತ ಪಟಾಕಿಗಳನ್ನು ಸಿಡಿಸದಂತೆ ನೋಡಿಕೊಳ್ಳುವುದು.
- ಪಟಾಕಿಗಳನ್ನು ಸುಡುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಪಟಾಕಿಗಳನ್ನು ಸಿಡಿಸುವಾಗ ಮೂಕ ಪ್ರಾಣಿಗಳಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು.
- ಸುಪ್ರೀಂ ಕೋರ್ಟ್ ಆದೇಶದಂತೆ ನಿಗಧಿತ ಸಮಯದಲ್ಲಿ ಅಂದರೆ, ರಾತ್ರಿ 8 ರಿಂದ 10
ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸುವುದು.
ಪಟಾಕಿ ಸಿಡಿಸುವ ಸಂದರ್ಭದಲ್ಲಿ ಕೈಗಳಿಗೆ ಕೈಗವಸು
ಧರಿಸುವುದು, ಕಣ್ಣುಗಳಿಗೆ ಸುರಕ್ಷತಾ ಕನ್ನಡಕಗಳನ್ನು ಧರಿಸುವುದು ಮುಖ್ಯ. - ಮೊದಲ ಪ್ರಯತ್ನದಲ್ಲಿ ಸಿಡಿಯದ ಪಟಾಕಿಗಳನ್ನು ಹತ್ತಿರಕ್ಕೆ ಹೋಗಿ ಮತ್ತೊಮ್ಮೆ ಪರೀಕ್ಷಿಸಬೇಡಿ. ಪಟಾಕಿ ಹಚ್ಚುವ ವೇಳೆ ಹತ್ತಿಯ ಬಟ್ಟೆಯನ್ನು
ಧರಿಸುವುದು ಉತ್ತಮ. ಸಿಂಥಟಿಕ್, ನೈಲಾನ್, ಪಾಲಿಸ್ಟರ್ ಬಟ್ಟೆಗಳನ್ನು ಧರಿಸಬೇಡಿ. - ಕೈಯಲ್ಲಿ ಪಟಾಕಿಗಳನ್ನು ಹಿಡಿದ್ದು ಹಚ್ಚುವುದು ಅಪಾಯಕಾರಿ, ದೇಹದ ಸೂಕ್ಷ್ಮ ಅಂಗಾಂಗಗಳಾದ ಕಿವಿ, ಕಣ್ಣು ಬಾಯಿ, ಅಂಗಗಳ ಮೇಲೆ ಹೆಚ್ಚು ಗಮನವಿರಲಿ. ಪಟಾಕಿ ಸಿಡಿಸುವ ಸಂದರ್ಭದಲ್ಲಿ ಯಾವುದಾದರೂ ಅವಘಡಗಳು ಸಂಭವಿಸಿದಲ್ಲಿ ತಕ್ಷಣವೇ 112 ಹಾಗೂ 108 ಕ್ಕೆ
ಸಂಪರ್ಕಿಸುವುದು ಹಾಗೂ ವೈದ್ಯರ ಸಲಹೆಯನ್ನು ಪಡೆದುಕೊಳ್ಳುವುದು.
13 ಸಿಡಿಯದ, ಠುಸ್ ಆಗಿರುವ ಪಟಾಕಿಗಳನ್ನು ಗುಡ್ಡೆ ಹಾಕಿ ಬೆಂಕಿ ಹಚ್ಚುವುದು ಹೆಚ್ಚು ಅಪಾಯಕಾರಿ. ಪಟಾಕಿ ಸಿಡಿಸಿದ ನಂತರ ಮೈದಾನ/ರಸ್ತೆಗಳು/ಮನೆ ಮುಂದಿನ ಅಂಗಳಗಳಲ್ಲಿ ಸಚ್ಛತೆಯನ್ನು ಕಾಪಾಡುವುದು.
- ಪಟಾಕಿ ಸಿಡಿಸಲು ಸುಪ್ರೀಂಕೋರ್ಟ್ ಆದೇಶದನ್ವಯ ಸರ್ಕಾರ ಸಮಯ ನಿಗಧಿಪಡಿಸಿದೆ. ನಿಗದಿತ ಅವಧಿ ಬಿಟ್ಟು ಸಮಯ ಮೀರಿ ಪಟಾಕಿ ಸಿಡಿಸಿದರೆ ಅವರ ವಿರುದ್ಧ ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆ ಆರೋಪದಡಿ ಪೊಲೀಸರು
ಕ್ರಮ ಕೈಗೊಳ್ಳಲಿದ್ದಾರೆ. ಈ ಕುರಿತು ಸಾರ್ವಜನಿಕರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬಹುದು.
ಬೆಂಗಳೂರಿನಲ್ಲಿ 315 ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಪಟಾಕಿ ಮಳಿಗೆಗಳನ್ನು ದಿ:29/10/2024 ರಿಂದ 02/11/2024 ರವರೆಗೆ ಮಾತ್ರ ಅನುಮತಿ ನೀಡಲಾಗಿದೆ.
ಸಾರ್ವಜನಿಕರಿಂದ ಚಿಲ್ಲರೆ ಪಟಾಕಿ ಪರವಾನಗಿ ಪಡೆಯಲು 74 ಮೈದಾನಗಳಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯಲು ಒಟ್ಟು 1,518 ಆನ್-ಲೈನ್ ಅರ್ಜಿಗಳು ಸಲ್ಲಿಕೆಯಾಗಿದ್ದವು. ಸಾರ್ವಜನಿಕರ ಸಮ್ಮುಖದಲ್ಲಿ ಲಾಟರಿ ಮೂಲಕ 315 ಮಾರಾಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ.
ತಾತ್ಕಾಲಿಕ ಪಟಾಕಿ ಮಾರಾಟ ಮತ್ತು ಬಳಕೆಯ ನಿಯಂತ್ರಿಸುವ ಸಂಬಂಧಪಟ್ಟ ಪೊಲೀಸ್ ಇಲಾಖೆಯ ಸಹಾಯಕ ಪೊಲೀಸ್ ಆಯುಕ್ತರು, ಬಿ.ಬಿ.ಎಂ.ಪಿ, ಆಗಿಶಾಮಕ ಇಲಾಖೆ, ವಿದ್ಯುತ್ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರತಿನಿಧಿಗಳನ್ನೊಳಗೊಂಡ ತಂಡವನ್ನು ರಚಿಸಲಾಗಿದೆ.