ಕಾರ್ಖಾನೆ ಕಾರ್ಮಿಕರ ಕೆಲಸದ ಅವಧಿ ಇಳಿಸಲು ನಿರ್ಧಾರ: ಸಿಎಂ ಸಿದ್ದರಾಮಯ್ಯ ಭರವಸೆ

ದೇಶದ ಆರ್ಥಿಕತೆಯ ಬಹುಮುಖ್ಯ ಸಮುದಾಯ ಕಾರ್ಖಾನೆ ಕಾರ್ಮಿಕರ ಕೆಲಸದ ಅವಧಿ ಇಳಿಕೆಗೆ ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ನೀರಾವರಿ ಹೋರಾಟಗಾರರು, ಭೂ ಹೀನರ ಹೋರಾಟ ಸಮಿತಿ, ಕಟ್ಟಡ ಕಾರ್ಮಿಕರ ಹೋರಾಟ ಸಮಿತಿ ಹಾಗೂ ಮಹಿಳಾ ಸಂಘಟನೆಗಳು ಹಾಗೂ ಟ್ರೇಡ್ ಯೂನಿಯನ್ ಸಂಘಟನೆಗಳ ಸಮನ್ವಯ ಸಮಿತಿಯ ನಾಯಕರುಗಳು, ಪದಾಧಿಕಾರಿಗಳ ಜೊತೆ ಇಂದು ಸಿಎಂ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ಕಾರ್ಖಾನೆ ಕಾರ್ಮಿಕರ ಕೆಲಸದ ಅವಧಿ 12 ಗಂಟೆಯಿಂದ 8 ಗಂಟೆಗೆ ಇಳಿಕೆಗೆ ನಿರ್ಧಾರ ಮಾಡಲು ಕಾರ್ಮಿಕ ಮುಖಂಡರಿಗೆ ಭರವಸೆ ನೀಡಿದರು.

ರೈತರ, ಕಾರ್ಮಿಕರ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ, ಬಿಜೆಪಿ ಅವಧಿಯಲ್ಲಿ 8 ಗಂಟೆ ಅವಧಿಯನ್ನ 12 ಗಂಟೆಗೆ ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ 12 ಗಂಟೆಯಿಂದ 8 ಗಂಟೆಗೆ ಕೆಲಸದ ಅವಧಿ ಇಳಿಕೆಗೆ ಸರ್ಕಾರ ನಿರ್ಧಾರ ಮಾಡಿದ್ದು, ಈ ಬಗ್ಗೆ ಶೀಘ್ರವೇ ನಿರ್ಧಾರ ಪ್ರಕಟಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

More articles

Latest article

Most read