Thursday, October 31, 2024

ಶಕ್ತಿ ಯೋಜನೆ ಕೈ ಬಿಡಲ್ಲ; ಸಿದ್ದರಾಮಯ್ಯ ಸ್ಪಷ್ಟನೆ.

Most read

ಬೆಂಗಳೂರು: ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.


ಬೆಂಗಳೂರಿನಲ್ಲಿ ಮಾತನಾಡಿದ ಅವರು ಯಾವ ಅರ್ಥದಲ್ಲಿ ಡಿಸಿಎಂ ಶಿವಕುಮಾರ್ ಹೇಳಿಕೆ ನೀಡಿದ್ದಾರೆ ಎಂದು ತಿಳಿದಿಲ್ಲ. ಶಕ್ತಿ ಯೋಜನೆ ಪರಿಷ್ಕರಣೆಗೆ ಯಾವುದೇ ಪ್ರಸ್ತಾಪ ಬಂದಿಲ್ಲ. ಮಹಿಳೆಯರ ಅಭಿಪ್ರಾಯಗಳು ಏನೆಂದು ನನಗೆ ತಿಳಿದಿಲ್ಲ. ಈ ಸಂಬಂಧ ನಾನು ಡಿಸಿಎಂ ಜೊತೆ ಮಾತನಾಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.


ನಿನ್ನೆಯಷ್ಟೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶಕ್ತಿ ಯೋಜನೆ ಕುರಿತು ತಮ್ಮದೇ ಆದ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಕೆಲವು ಮಹಿಳೆಯರು ನಮಗೆ ಟಿಕೆಟ್ ಖರೀದಿಸಿ ಪ್ರಯಾಣಿಸಲು ಶಕ್ತಿ ಇದೆ. ಉಚಿತ ಪ್ರಯಾಣದ ಅವಶ್ಯಕತೆ ಇಲ್ಲ. ಟಿಕೆಟ್ ಕೊಡಿ ಎಂದರೂ ಕೆಲವು ಕಂಡಕ್ಡರ್ ಗಳು ನೀಡುವುದಿಲ್ಲ. ಇಂತಹ ಅನೇಕ ಅಭಿಪ್ರಾಯಗಳನ್ನು ಅನೇಕ ಮಹಿಳೆಯರು ನನಗೆ ಇ ಮೇಲ್ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿಕೆ ನೀಡಿದ್ದರು.

More articles

Latest article