ಕಿರಾಣಿ ಅಂಗಡಿಯೊಂದರಲ್ಲಿ ಎರಡು ಎಲ್ಪಿಜಿ ಸಿಲಿಂಡರ್ಗಳು ಇದ್ದಕ್ಕಿದ್ದಂತೆ ಸ್ಫೋಟಗೊಂಡ ಪರಿಣಾಮ ತಾಯಿ ಮತ್ತು ಆಕೆಯ ಇಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆ ಮುಂಬೈನ ಜಾವ್ಲೆ ಎಂಬ ಗ್ರಾಮದಲ್ಲಿ ನಡೆದಿದೆ.
ಬುಧವಾರ ಸಂಜೆ ಈ ಘಟನೆ ಸಂಭವಿಸಿದ್ದು, ಮೂವರು ಸಾವನಪ್ಪಿದ್ದು, ತೀವ್ರ ಸುಟ್ಟಗಾಯಗಳಿಂದ ಓರ್ವ ವ್ಯಕ್ತಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ಅಂಗಡಿಯಲ್ಲಿ 5 ಕೆಜಿ ತೂಕದ ಎರಡು ಸಿಲಿಂಡರ್ಗಳು ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆ ಭೀಕರವಾಗಿತ್ತು ಎಂದು ಹೇಳಲಾಗಿದೆ.
ಈ ಅಂಗಡಿಯಲ್ಲಿ ಸಿಲಿಂಡರ್ ಹಾಗೂ ಪೆಟ್ರೋಲ್ ಸಹ ಮರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಮುಂಜಾಗ್ರತಾ ಕ್ರಮವಾಗಿ ಸುತ್ತಮುತ್ತಲಿನ ಮನೆಗಳನ್ನು ತೆರವು ಮಾಡಲಾಗಿತ್ತು. ಸಿಲಿಂಡರ್ ಸ್ಫೋಟಕ್ಕೆ ಸದ್ಯಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.