ಎರಡು ಬಾರಿ ನಾನು ಚುನಾವಣೆಯಲ್ಲಿ ಸೊತ್ತಿದ್ದೇನೆ ನಾನು ಏನು ತಪ್ಪು ಮಾಡಿದ್ದೇನೆ ಗೊತ್ತಿಲ್ಲ. ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯ ಮಂತ್ರಿ ಮಗನಾಗಿ ಹುಟ್ಟಿರುವುದೇ ನನ್ನ ದುರದೃಷ್ಟನೋ ಗೊತ್ತಿಲ್ಲ ಎಂದು ಚನ್ನಪಟ್ಟಣದಲ್ಲಿ ಮತಯಾಚನೆ ವೇಳೆ ಕಣ್ಣೀರು ಹಾಕಿರುವ ಘಟನೆ ನಡೆದಿದೆ.
ಕಳೆದ 20 ವರ್ಷದ ರಾಜಕೀಯ ಇತಿಹಾಸದಲ್ಲಿ ಹೆಚ್ ಡಿ ಕುಮಾರಸ್ವಾಮಿ ಅಂಡ್ ಫ್ಯಾಮಿಲಿ ಕಣ್ಣೀರು ಹಾಕದೇ ಚುನಾವಣೆ ನಡೆಸಿರುವ ಒಂದೇ ಒಂದು ನಿದರ್ಶನ ಇಲ್ಲ. ಇದೇ ಮುಂದುವರೆದ ಭಾಗದಂತೆ ಅಪ್ಪನ ಚಾಳಿಯನ್ನು ಈಗ ನಿಖಿಲ್ ಕುಮಾರಸ್ವಾಮಿ ಕೂಡ ಮುಂದುವರೆಸಿದ್ದಾರೆ. ಮತಕ್ಕಾಗಿ ಜನರ ಮುಂದೆ ಕಣ್ಣೀರು ಹಾಕುತ್ತಿದ್ದಾರೆ.
ಕನ್ನಮಂಗಲ ಗ್ರಾಮದ ಪ್ರಚಾರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಮತಕ್ಕಾಗಿ ಭಾವುಕರಾಗಿದ್ದಾರೆ. ಈ ಚುನಾವಣೆಯಲ್ಲಿ ನಾನು ಕಣ್ಣೀರು ಹಾಕಬಾರದು ಅಂನ್ಕೊಂಡಿದ್ದೇ. ಆದರೆ ಸಾಕಷ್ಟು ನೋವುಗಳಿವೆ ಎಂದು ಭಾಷಣದ ವೇಳೆ ಕಣ್ಣೀರು ಹಾಕಿದ್ದಾರೆ.
ನಾನು ಎರಡು ಚುನಾವಣೆಯಲ್ಲೂ ಪೆಟ್ಟು ತಿಂದಿದ್ದೇನೆ. ಜನ ನನ್ನ ಪರವಾಗಿ ಮತ ಹಾಕಿದ್ದಾರೆ. ಆದರೆ ರಾಜಕೀಯ ಷಡ್ಯಂತ್ರಕ್ಕೆ ನಾನು ಬಲಿಯಾಗಿದ್ದೇನೆ. ಬಹಳ ನೋವಿನಲ್ಲಿ ಇದ್ದೇನೆ. ಇವತ್ತು ಪಕ್ಷದ ಕಾರ್ಯಕರ್ತರಿಗೆ ಬೆಲೆ ಕೊಡಬೇಕೆಂದು ಈ ಚುನಾವಣೆಯಲ್ಲಿ ನಿಂತಿದ್ದೇನೆ. ದಯವಿಟ್ಟು ಈ ಬಾರಿ ಈ ಯುವಕನನ್ನ ಗೆಲ್ಲಿಸಿ ಎಂದು ಕುಮಾರಸ್ವಾಮಿ ಅವರನ್ನು ಮೀರಿಸುವಂತೆ ಮನವಿ ಮಾಡಿದ್ದಾರೆ.
ರೈತ ಪರವಾಗಿ ಕಾಳಜಿ ಇಟ್ಟ್ಕೊಂಡು ಈ ಪಕ್ಷವನ್ನು ಕಟ್ಟಿದ್ದಾರೆ. ನಂತರ ಕುಮಾರಣ್ಣ ಅವರು ಅಧಿಕಾರ ಇರಲಿ ಇಲ್ಲದೆ ಇರಲಿ ರೈತರ ಪರವಾಗಿ ನಿರಂತರವಾಗಿ ಸಾಲ ಮನ್ನಾ ಮಾಡಿದ್ದಾರೆ. ಅನೇಕ ಅಭಿವೃದ್ದಿ ಕೆಲಸಗಳು ಮಾಡಿದ್ದಾರೆ ಎಂದು ಕೊಂಡಾಡಿದ್ದಾರೆ. ಆದರೆ ರೈತ ವಿರೋಧಿ ನೀತಿಗಳಿಗೆ ಜೆಡಿಎಸ್ ಪಕ್ಷ ಸಂಪೂರ್ಣ ಬೆಂಬಲ ನೀಡಿ ಅಂದು ತೀರ್ವ ಮುಜುಗರಕ್ಕೆ ಒಳಗಾಗಿತ್ತು ಎಂಬುದನ್ನು ನೆನೆಯಬಹುದು. ಜೊತೆಗೆ ರೈತ ವಿರೋಧಿ ಸರ್ಕಾರದ ಜೊತೆ ಹೊಂದಾಣಿಕೆ ಮಾಡಿಕೊಂಡು ಮಂತ್ರಿ ಪದವಿಯನ್ನು ಪಡೆಯುವಲ್ಲಿ ಕುಮಾರಸ್ವಾಮಿ ಅವರು ಯಶಸ್ವಿಯಾಗಿದ್ದಾರೆ.
ಇಷ್ಟೆಲ್ಲಾ ಮಾಡಿ ಮತ್ತೆ ಚುನಾವಣೆ ಬಂದಿದ್ದು ಕುಮಾರಸ್ವಾಮಿ ಅಂಡ್ ಫ್ಯಾಮಿಲಿ ಚನ್ನಪಟ್ಟಣದಲ್ಲಿ ಕಣ್ಣೀರ ಕೋಡಿ ಹರಿಸಿ ಮತಭೇಟೆಯಾಡಲು ಸಿದ್ದವಾಗಿದೆ ಎಂದು ಹಲವರು ಟೀಕಿಸಿದ್ದಾರೆ.