ನವದೆಹಲಿ: ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್ ದರವನ್ನು ರೂ. 62 ಏರಿಕೆ ಮಾಡಲಾಗಿದೆ. ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 1,802 ರೂ.ಗೆ ಏರಿಕೆಯಾಗಿದೆ. ಆದರೆ ಗೃಹ ಬಳಕೆ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
5 ಕೆ.ಜಿ. ಫ್ರೀ ಟ್ರೇಡ್ ಎಲ್ಪಿಜಿ ಸಿಲಿಂಡರ್‌ಗಳ ಬೆಲೆ 15 ರೂಪಾಯಿ ಹೆಚ್ಚಾಗಿದೆ, ಆದರೆ 14.2 ಕೆ.ಜಿ. ಸಿಲಿಂಡರ್ ದರದಲ್ಲಿ ಬದಲಾವಣೆಯಾಗಿಲ್ಲ.
ಸೆಪ್ಟಂಬರ್ 1, ಅಕ್ಟೋಬರ್ 1 ಮತ್ತು ಈಗ ನವಂಬರ್ 1 ರಂದು ಬೆಲೆ ಏರಿಕೆ ಮಾಡಲಾಗಿದೆ. ದೆಹಲಿ, ಮುಂಬೈ, ಕೋಲ್ಕತ್ತಾ ಚೆನ್ನೈ ನಗರಗಳಲ್ಲಿ ದರ ಏರಿಕೆ ಮಾಡಲಾಗಿದ್ದು, ಇಂದಿನಿಂದಲೇ ಜಾರಿಗೆ ಬರಲಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ದರ ಏರಿಕೆ ಹಾಗೂ ವಿದೇಶಿ ವಿನಿಮಯ ದರಕ್ಕೆ ಅನುಗುಣವಾಗಿ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು, ಪ್ರತಿ ತಿಂಗಳು ದರ ಪರಿಷ್ಕರಣೆ ಮಾಡುತ್ತವೆ.
ಬೆಂಗಳೂರಿನಲ್ಲಿ ಇಂದು ಶುಕ್ರವಾರ ವಾಣಿಜ್ಯ ಬಳಕೆಯ 19 ಕೆ.ಜಿ. ಸಿಲಿಂಡರ್ ದರ 1.879 ರೂ.ಗಳಷ್ಟಿದೆ. 47 ಕೆಜಿ ವಾಣಿಜ್ಯ ಸಿಲಿಂಡರ್ ದರ ರೂ. ೪,೬೯೫ ನಷ್ಟಿದೆ. ಗೃಹ ಬಳಕೆಯ ಸಿಲಿಂಡರ್ ದರ ನೋಡುವುದಾದರೆ 14.2 ಕೆಜಿ ಸಿಲಿಂಡರ್ ದರ 802 ರೂ. ಮತ್ತು 5ಕೆಜಿ ಸಿಲಿಂಡರ್ ದರ ರೂ. 300 ಇದೆ