ಹುಬ್ಬಳ್ಳಿ: ಹೊಸದಾಗಿ ಮದ್ಯದಂಗಡಿಗಳಿಗೆ ಪರವಾನಗಿ ನೀಡಲು ಚಿಂತನೆ ನಡೆಸಿರುವುದಾಗಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ.
ಮಂಗಳವಾರ ಇಲ್ಲಿ ಮಾತನಾಡಿದ ಅವರು ಈ ವಿಷಯ ಕುರಿತು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದ ಅವರು ಅಬಕಾರಿ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ಮಾಡಿಲ್ಲ. ಸಹಜವಾಗಿಯೇ ಅಧಿಕಾರಿಗಳಿಗೆ ಬಡ್ತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಯಾವುದೇ ಸರ್ಕಾರದ ಇಂತಹ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗುವುದು ಸಹಜ. ಸಾರ್ವಜನಿಕರು ತಮ್ಮ ತಮ್ಮ ಊರು, ಬಡಾವಣೆಗಳಲ್ಲಿ ಬಾರ್ ಮತ್ತು ವೈನ್ ಶಾಪ್ ಗಳ ಆರಂಭಕ್ಕೆ ಪ್ರತಿರೋಧ ವ್ಯಕ್ತಪಡಿಸುತ್ತಾರೆ. ಈಗಾಗಲೇ ಸರ್ಕಾರ ತನ್ನದೇ ಸಂಸ್ಥೆ ಎಂಎಸ್ ಐಎಲ್ ಮೂಲಕ ವೈನ್ ಶಾಪ್ ಗಳನ್ನು ಆರಂಭಿಸುತ್ತಿದೆ. ಸಾರ್ವಜನಿಕರಿಗೆ ಅವಕಾಶ ನೀಡುತ್ತಿಲ್ಲ. ಈಗಲೂ ಎಂಎಸ್ ಐಎಲ್ ಮೂಲಕ ತೆರೆಯಲಾಗುತ್ತದೆಯೇ ಅಥವಾ ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತದೆಯೇ ಎಂದು ತಿಳಿದು ಬಂದಿಲ್ಲ. ಈ ನಿರ್ಧಾರ ಕುರಿತು ಮುಖ್ಯಮಂತ್ರಿಗಳ ಒಪ್ಪಿಗೆ ಪಡೆಯಬೇಕು. ನಂತರ ಸಚಿವ ಸಂಪುಟದಲ್ಲಿ ಚರ್ಚಿಸಬೇಕು. ಆ ನಂತರವಷ್ಟೇ ಮದ್ಯದಂಗಡಿಗಳನ್ನು ಆರಂಭಿಸಲು ಸಾಧ್ಯ.