ಬೆಳಗಾವಿ: ಬೆಳಗಾವಿ ತಹಶೀಲ್ದಾರ್ ಪ್ರಥಮ ದರ್ಜೆ ಸಹಾಯಕ (FDA)ರೊಬ್ಬರು ತಹಶೀಲ್ದಾರ್ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಹಶೀಲ್ದಾರ್ ಕಚೇರಿಯ 35 ವರ್ಷದ FDA ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಇವರು ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸಿಬ್ಬಂದಿ ಕಚೇರಿಗೆ ಆಗಮಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ.
ಮೇಲಧಿಕಾರಿಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಆರೋಪಿಸಿ ತಮ್ಮ ಮೊಬೈಲ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.