ಬೆಳಗಾವಿ ವಿಧಾನ ಮಂಡಲ ಜಂಟಿ ಅಧಿವೇಶನಕ್ಕೆ ಬರಾಕ್ ಒಬಾಮ ಆಹ್ವಾನ

Most read

ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲ ಜಂಟಿ ಅಧಿವೇಶನ ಮತ್ತು ಮಹಾತ್ಮ ಗಾಂಧಿಯವರ ಬೆಳಗಾವಿ ಭೇಟಿಯ ಶತಮಾನೋತ್ಸವ ಆಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಆಹ್ವಾನಿಸಿದ್ದಾರೆ.

1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಸಂದಿದೆ. ಈ ಹಿನ್ನೆಲೆ ಬೆಳಗಾವಿಯಲ್ಲಿ ನಡೆಯಲಿರುವ ಜಂಟಿ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಒಬಾಮ ಅವರಿಗೆ ಪತ್ರ ಬರೆದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಮಹಾತ್ಮಾ ಗಾಂಧಿಯವರು 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 39 ನೇ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ಅವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ ಇದಾಗಿತ್ತು.

ಕಾನೂನು ಸಚಿವ ಹಾಗೂ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಚ್​ ಕೆ ಪಾಟೀಲ್ ಅವರು​ ಮಾತನಾಡಿ, ಅಂತಾರಾಷ್ಟ್ರೀಯ ಮಹತ್ವ ಪಡೆಯಲು ವಿಧಾನಮಂಡಲ ಜಂಟಿ ಅಧಿವೇಶನ ನಡೆಸಲು ಹಾಗೂ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ಕರೆಸಲು ಉದ್ದೇಶಿಸಲಾಗಿದೆ. ಗಾಂಧೀಜಿಯ ಕುರಿತು ವಿಶೇಷ ಅಭಿಮಾನ ಹೊಂದಿರುವ ಒಬಾಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಬೇಕು ಎಂಬುದು ಎಲ್ಲರ ಆಶಯವಾಗಿದೆ ಎಂದು ಹೇಳಿದ್ದಾರೆ.

More articles

Latest article