ನರಗುಂದ ಬಳಿ ಕಾರು-ಲಾರಿ ಡಿಕ್ಕಿ : ದಂಪತಿ ಸ್ಥಳದಲ್ಲೇ ಸಾವು

ನರಗುಂದ: ಲಾರಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಾಯವಾದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

ಬಾಗಲಕೋಟೆ ಮೂಲದ ಸಿದ್ದರಾಮ ಹಾಗೂ ಹೇಮಾ ಎಂಬ ದಂಪತಿ ಸಾವನ್ನಪ್ಪಿದ್ದಾರೆ‌. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾಗೆ ತುಂಬಾ ಗಾಯಗಳಾಗಿವೆ. ಗಾಯಾಳು ಮಕ್ಕಳನ್ನ ನರಗುಂದ ತಾಲೂಕಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಬೆಳಿಗ್ಗೆ ಮುಸಕಿನ ಜಾವದಲ್ಲಿ ಈ ಅಪಘಾತ ಸಂಭವಿಸಿದೆವ. ಮೃತ ಕುಟುಂಬವು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿಕೊಂಡು ಮರಳಿ ಊರಿಗೆ ಬರುತ್ತಿದ್ದಾಗ ದಾರಿ ಮಧ್ಯೆ ಈ ದುರ್ಘಟನೆ ನಡೆದಿದೆ.

ಹುಬ್ಬಳ್ಳಿ ಕಡೆಗೆ ಹೊರಟ್ಟಿದ್ದ ಲಾರಿ ಏಕಾಏಕಿ ಕಾರಿ ಗುದ್ದಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗ ಜಿಲ್ಲೆಯ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More articles

Latest article

Most read