ಇಡೀ ಜಗತ್ತೆ ಬೇರಗಾಗಿ ಕುಳಿತಿದ್ದ ಅಮೇರಿಕಾದ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಹೊರಬಂದಿದ್ದು, ಕಮಲಾ ಹ್ಯಾರಿಸ್ ಅವರ ವಿರುದ್ಧ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಎರಡನೇ ಭಾರಿಗೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ. ಈ ಮೂಲಕ ವಿಶ್ವದ ದೊಡ್ಡಣ್ಣ ರಾಷ್ಟ್ರದಲ್ಲಿ ಚುನಾವಣೆಯ ಕುತೂಹಲಕ್ಕೆ ಇಂದು (ಬುಧವಾರ) ತೆರೆ ಬಿದ್ದಿದೆ.
ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗಿಂತ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇಲ್ಲಿಯವರೆಗೂ ಕಮಲಾ ಹ್ಯಾರಿಸ್ 224 ಮತಗಳನ್ನು ಪಡೆದಿದ್ದರೆ, ಡೊನಾಲ್ಡ್ ಟ್ರಂಪ್ ಅವರು 267 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.