ಡಾ. ಬಂಜಗೆರೆ, ದಾಸನೂರು ಕೂಸಣ್ಣ, ಎಚ್. ಎನ್. ಆರತಿ ಸೇರಿ ಹತ್ತು ಮಂದಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ

Most read

ಬೆಂಗಳೂರು: ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಗಮನಾರ್ಹವಾದ ಸೇವೆಯನ್ನು ಪರಿಗಣಿಸಿ 10 ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ನೇ ವರ್ಷದ ‘ಸಾಹಿತ್ಯಶ್ರೀ’ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ಈ ಬಾರಿ ಸೃಜನಶೀಲ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದವರಿಗೆ 5 ಪ್ರಶಸ್ತಿಗಳು, ಸೃಜನೇತರ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದವರಿಗೆ 4 ಪ್ರಶಸ್ತಿಗಳು ಹಾಗೂ ಸಾಹಿತ್ಯ ಪರಿಚಾರಿಕೆಗೆ 1 ಪ್ರಶಸ್ತಿಯಂತೆ ಒಟ್ಟು 10 ಗಣ್ಯರಿಗೆ ಸಾಹಿತ್ಯಶ್ರೀ ಪ್ರಶಸ್ತಿ ನೀಡಲಾಗಿದೆ. 25 ಸಾವಿರ ರೂ. ನಗದು, ಫಲಕ, ಶಾಲು, ಹಾರ ಹಾಗೂ ಪ್ರಮಾಣಪತ್ರದೊಂದಿಗೆ ಸಾಹಿತ್ಯಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ ಎಂದು ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಅವರು ತಿಳಿಸಿದ್ದಾರೆ.


ಪ್ರಶಸ್ತಿ ಪುರಸ್ಕೃತ ಸಾಹಿತಿಗಳು:
ಡಾ. ಬಂಜಗೆರೆ ಜಯಪ್ರಕಾಶ, ರೂಮಿ ಹರೀಶ್, ಡಾ. ಎಂ. ಜಿ. ಮಂಜುನಾಥ, ದಾಸನೂರು ಕೂಸಣ್ಣ, ಡಾ. ರಾಜಶೇಖರ ಹತಗುಂದಿ, ಎಚ್. ಎನ್. ಆರತಿ, ಡಾ. ಸಾರಿಕಾದೇವಿ ಕಾಳಗಿ, ಮಹೇಶ್ ಹರವೆ, ಅನಸೂಯ ಕಾಂಬ್ಳೆ, ಚಲಂ ಹಾಡ್ಲಹಳ್ಳಿ.

2022ನೆಯ ವರ್ಷದ ಗೌರವ ಪ್ರಶಸ್ತಿ ಪುರಸ್ಕೃತರು

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಈ ಕೆಳಕಂಡ 5 ಜನ ಹಿರಿಯ ಸಾಹಿತಿಗಳಿಗೆ ಐವತ್ತು ಸಾವಿರ ರೂಪಾಯಿಗಳ ನಗದು, ಪ್ರಶಸ್ತಿ ಫಲಕ, ಶಾಲು, ಹಾರ ಹಾಗೂ ಪ್ರಮಾಣ ಪತ್ರದೊಂದಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ನೆಯ ವರ್ಷದ ಗೌರವ ಪ್ರಶಸ್ತಿಯನ್ನು ನೀಡಬೇಕೆಂದು ಅಕಾಡೆಮಿ ಅಧ್ಯಕ್ಷರಾದ ಶ್ರೀ ಎಲ್. ಎನ್. ಮುಕುಂದರಾಜ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ: 06-11-2024ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಗಿರುತ್ತದೆ.

More articles

Latest article