ದತ್ತಮಾಲಾ ಅಭಿಯಾನ: 2 ದಿನ ಮುಳ್ಳಯ್ಯನಗಿರಿ ಪ್ರವಾಸಿ ತಾಣಗಳಿಗೆ ನಿಷೇಧ!

Most read

ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಶ್ರೀರಾಮಸೇನೆಯ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ನ.9 ಹಾಗೂ 10 ರಂದು ಎರಡು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಪ್ರದೇಶದಲ್ಲಿ ಓಡಾಡಲು ದತ್ತ ಮಾಲಾಧಾರಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಮುಳ್ಳಯ್ಯನಗಿರಿ, ದತ್ತಪೀಠ, ಗಾಳಿಕೆರೆ, ಸೀತಾಳಯ್ಯನಗಿರಿ, ಮಾಣಿಕ್ಯಾಧಾರ ತಾಣಗಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ದತ್ತಮಾಲಾಧಾರಿಗಳು ಶ್ರೀರಾಮಸೇನಾ ಮುಖಂಡರು/ಕಾರ್ಯಕರ್ತರು ಸುತ್ತ ಮುತ್ತಲಿನ ವ್ಯಾಪ್ತಿಯಲ್ಲಿ ಬರುವ ಸ್ಥಳೀಯರು ಹಾಗೂ ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳನ್ನು ಮಾಡುವವರು ಮತ್ತು ಈಗಾಗಲೇ ಹೋಮ್ ಸ್ಟೇ/ರೆಸಾರ್ಟ್‌ಗಳನ್ನು ಬುಕ್ಕಿಂಗ್ ಮಾಡಿಕೊಂಡವರುಗಳನ್ನು ಹೊರತು ಪಡಿಸಿ ಇತರೆ ಯಾವುದೇ ಪ್ರವಾಸಿಗರು ಯಾತ್ರಾರ್ಥಿಗಳು ಬರುವುದನ್ನು / ಭೇಟಿ ನೀಡುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

More articles

Latest article