ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜಸ್ಥಾನ ಮೂಲದ ಬಿಕಾರಾಮ್‌ನನ್ನು ಹಾವೇರಿ ನಗರದಲ್ಲಿ ಬಂಧಿಸಲಾಗಿದೆ.

ರಾಜಸ್ಥಾನದ ಜಾಲೋರ್ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿ ರೂಮ್‌ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು, ಮುಂಬೈ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತ್ತೀಚೆಗೆ, ಮುಂಬೈನಲ್ಲಿ ಸಲ್ಮಾನ್ ಖಾನ್ ಅವರ ಆತ್ಮೀಯರಾದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿಯವರನ್ನು ಬಿಷ್ಣೋಯಿ ಗ್ಯಾಂಗ್ ನವರು ಹತ್ಯೆ ಮಾಡಿದ್ದಾರೆ.

ಈ ಘಟನೆಯ ನಂತರ ಸಲ್ಮಾನ್ ಖಾನ್ ಅವರಿಗೆ ಕೆಲವರು ಕರೆ ಮಾಡಿ ಬೆದರಿಕೆ ಹಾಕಿ ತಮಗೆ ಇಂತಿಷ್ಟು ಹಣ ಕೊಟ್ಟರೆ ಬಿಡುತ್ತೇವೆಂದು ಹೇಳುತ್ತಿದ್ದಾರೆ.

More articles

Latest article

Most read