ಪ್ರಜ್ವಲ್ ರೇವಣ್ಣಗೆ ಹಿನ್ನಡೆ. ಸುಪ್ರೀಂಕೋರ್ಟ್ ನಲ್ಲೂ ಜಾಮೀನು ಅರ್ಜಿ ವಜಾ

Most read

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌  ವಜಾಗೊಳಿಸಿದೆ. ಹೀಗಾಗಿ ಹಿನ್ನೆಡೆ ಅನುಭವಿಸಿರುವ ಪ್ರಜ್ವಲ್‌ ಗೆ ಜೈಲೇ ಗತಿಯಾಗಿದೆ.

ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ನಿರಅಕರಿಸಿರುವ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಪ್ರಜ್ವಲ್‌ ರೇವಣ್ಣ ಇದೇ ತಿಂಗಳ ೧೦ರಂದು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು ನಡೆಯಿತು. ನ್ಯಾಯಮೂರ್ತಿಗಳಾದ ಸತೀಶ್‌ ಚಂದ್ರ ವರ್ಮಾ ಮತ್ತು ಬೇಲಾ ಎಂ.ತ್ರಿವೇದಿ ಅವರ ಪೀಠ ವಿಚಾರಣೆ ನಡೆಸಿತು.

ಕಳೆದ ಅಕ್ಟೋಬರ್‌ 21ರಂದು ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಹೈಕೋರ್ಟ್‌ ತಿರಸ್ಕರಿಸಿತ್ತು. ಪ್ರಜ್ವಲ್‌ ರೇವಣ್ಣ ಒಬ್ಬ ಲಂಪಟ ಹಾಗೂ ತನ್ನ ಇಂದ್ರಿಯಗಳ ಮೇಲೆ ನಿಯಂತ್ರಣ ಕಳೆದುಕೊಂಡು ಕಾಮಾಧನಂತೆ ವರ್ತಿಸಿದ್ದಾರೆ ಎಂದು ಅಭಿಪ್ರಾಯಪಟ್ಟಿತ್ತು.

ಪ್ರಜ್ವಲ್‌ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಒಂದು ಪ್ರಕರಣ ಹಾಗೂ  ಸಿಐಡಿ ಸೈಬರ್ ಸೆಲ್‌ನಲ್ಲಿ ದಾಖಲಾಗಿದ್ದ 2 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ಪ್ರಜ್ವಲ್‌ ರೇವಣ್ಣ ತಂದೆ ಹಾಗೂ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಅವರ ವಿರುದ್ಧ ಕಳೆದ ಏಪ್ರಿಲ್‌ 28ರಂದು ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ದಾಖಲಿಸಿದ್ದರು. ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿತ್ತು. ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್‌ ರೇವಣ್ಣ ಎ2 ಆರೋಪಿಯಾಗಿದ್ದಾರೆ. 354 A, 354 D, 509 ಅಡಿ ಪ್ರಕರಣ ದಾಖಲಾಗಿತ್ತು.

More articles

Latest article