ಮಂಗಳೂರು: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ (45) ಅವರನ್ನು ಬಂಧಿಸಲಾಗಿದೆ.
ಶಿಲ್ಪಿ ಕೃಷ್ಣ ನಾಯಕ್ ನಕಲಿ ಮೂರ್ತಿ ನಿರ್ಮಿಸಿದ್ದಾರೆಂದು ನಲ್ಲೂರಿನ ಕೃಷ್ಣ ಶೆಟ್ಟಿ ಎಂಬುವುರು ದೂರು ನೀಡಿದ್ದರು. ಇವರ ದೂರು ಆಧರಿಸಿ ಕಾರ್ಕಳ ಪೊಲೀಸರು ಪುದುಚೇರಿಯ ಮಾಹೆ ಎಂಬಲ್ಲಿ ಬಂಧಿಸಿದ್ದಾರೆ.
ಕೃಷ್ಣ ನಾಯಕ್, ಕೃಷ್ ಆರ್ಟ್ ವರ್ಲ್ಡ್ ಸಂಸ್ತೆಯ ಹೆಸರಿನಲ್ಲಿ ಪರುಶರಾಮನ ಕಂಚಿನ ವಿಗ್ರಹ ನಿರ್ಮಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25ಕೋಟಿ ರೂ. ಅನುದಾನ ಪಡೆದುಕೊಂಡಿದ್ದರು. ಆದರೆ ಕಂಚಿನ ಮೂರ್ತಿಗೆ ಬದಲಾಗಿ ನಕಲಿ ವಿಗ್ರಹ ಸಿದ್ದಪಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಇವರ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ರದ್ದುಗೊಳಿಸುವಂತೆ ಇವರು ಉಡುಪಿ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಇವರಿಗೆ ಜಾಮೀನು ನಿರಾಕರಿಸಿತ್ತು. ಅಂದಿನಿಂದ ಕೃಷ್ಣ ನಾಯಕ್ ತಲೆಮರೆಸಿಕೊಂಡಿದ್ದರು. ಇದೀಗ ಅವರ ಬಂಧನವಾಗಿದೆ.