Sunday, September 8, 2024

ಸು.ಕೋ. ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಪಿ.ಬಿ. ವರಾಳೆ ಹೆಸರು ಶಿಫಾರಸ್ಸು

Most read

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ (Prasanna B. Varale ಅವರ ಹೆಸರು ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಈ ಮೊದಲು ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ ಅವರನ್ನು 2022ರ ಅಕ್ಟೋಬರ್ 11ರಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿತ್ತು. ಇದೀಗ ನ್ಯಾಯಮೂರ್ತಿ ಸ್ಥಾನಕ್ಕೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್.ದಿನೇಶ್ ಕುಮಾರ್ ನೇಮಕ ಮಾಡಲು ರಾಜ್ಯ ಸರ್ಕಾರಕ್ಕೆ ಶಿಪಾರಸ್ಸು ಮಾಡಿದೆ. ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಪದೋನ್ನತಿ ನಂತರ ದಿನೇಶ್ ಕುಮಾರ್ ಅವರು ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಲಿದ್ದಾರೆ.

More articles

Latest article