ಬೆಂಗಳೂರು : ಸದ್ಯ ನಗರದಲ್ಲಿ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ರಾಜ್ಯದ ಜನರು ಕಂಗಾಲಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ದೆಹಲಿ, ಮುಂಬೈ ಸೇರಿದಂತೆ ದೇಶದ ವಿವಿಧ ಪ್ರಮುಖ ನಗರಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುತ್ತು.
ಕಳೆದ ತಿಂಗಳು ಮಾರುಕಟ್ಟೆಯಲ್ಲಿ 40 ರಿಂದ 50 ರೂಪಾಯಿಯಷ್ಟಿದ್ದ ಈರುಳ್ಳಿ ಬೆಲೆ ಸಗಟು ಮಾರುಕಟ್ಟೆಯಲ್ಲಿ 80 ರಿಂದ 90 ರೂಪಾಯಿಗಳಿಗೆ ಏರಿಕೆಯಾಗಿದೆ. ಇದರಿಂದಾಗಿ ರೈತರಿಗೆ ಸಂಸತ ತಂದರೆ, ಮತ್ತೊಂದೆಡೆ ಜನರಿಗೆ ಕಣ್ಣೀರು ತರಿಸುವಂತಾಗಿದೆ.
ಇಂದು ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 80-90 ರೂಪಾಯಿ ಆಗಿದೆ. ಹೀಗಾಗಿ ಗ್ರಾಹಕರು ಈರುಳ್ಳಿಯ ಬೆಲೆಯು ಸೀಸನ್‌ಗೆ ಅನುಗುಣವಾಗಿ ಕಡಿಮೆಯಾಗಬೇಕಿದ್ದರೂ ಏರಿಕೆಯಾಗಿದೆ ಎಂದು ಆರೋಪ ಮಾಡುತ್ತಿದ್ದಾರೆ. ಇದರಿಂದ ಕುಟುಂಬದ ಆರ್ಥಿಕ ನಿರ್ವಹಣೆಯ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ. ಸರ್ಕಾರವು ಪ್ರತಿನಿತ್ಯದ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.