ಮೈಸೂರು : 170 ಕೋಟಿ ವೆಚ್ಚದಲ್ಲಿ ಮಹಾರಾಣಿ ಕಾಲೇಜಿನ ನೂತನ ಕಟ್ಟಡ ಶಂಕುಸ್ಥಾಪನೆ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ನವರು ಇಂದು ಶಂಕುಸ್ಥಾಪನೆಯನ್ನು ನೆರವೆರಿಸಿದರು.

ಶಂಕುಸ್ಥಾಪನೆಯ ನಂತರ ಮಾತನಾಡಿದ ಅವರು, ನೂತನ ವಸತಿ ನಿಲಯ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ₹170 ಕೋಟಿ ವೆಚ್ಚದಲ್ಲಿ ಸರ್ಕಾರ ಭರಿಸಲಾಗುವುದು ಎಂದು ಹೇಳಿದರು.

ಇದರ ಜೊತೆಗೆ 49 ಕೋಟಿ ರೂ. ವೆಚ್ಚದಲ್ಲಿ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ 3 ಮತ್ತು 4 ನೇ ಅಂತಸ್ತಿನ ಕಟ್ಟಡ ಹಾಗೂ ವಸತಿ ನಿಲಯದ 3ನೇ ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಗೂ ಸಹ ಶಂಕುಸ್ಥಾಪನೆಯನ್ನು ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ಡಾ.ತಿಮ್ಮಯ್ಯ, ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿ ಹಲವರು ಉಪಸ್ಥಿತರಿದ್ದರು.

More articles

Latest article

Most read