ವಾಲ್ಮಿಕಿ ನಿಗಮ ಹಗರಣ : ಸಿಬಿಐ ತನಿಖೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

Most read

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಬುಧವಾರ ವಜಾಗೊಳಿಸಿದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಅರ್ಜಿಯ ವಿಚಾರಣಾ ಮಾನ್ಯತೆ ಕುರಿತು ತೀರ್ಪು ಕಾಯ್ದಿರಿಸಿಕೊಂಡಿತ್ತು.

ಇಡೀ ಬ್ಯಾಂಕಿಂಗ್ ವಲಯದ ಪ್ರಾಮಾಣಿಕತೆಯನ್ನು ಖಾತರಿಪಡಿಸಲು ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿದೆ ಎಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪರ ವಕೀಲರು ವಾದಿಸಿದ್ದರು.

ಈ ಕುರಿತಂತೆ ತೀರ್ಪನ್ನು ಕಾಯ್ದಿರಿಸಿದ್ದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ತೀರ್ಪನ್ನು ಪ್ರಕಟಿಸಿತು.  

More articles

Latest article