ಅತ್ಯಾಚಾರ ಆರೋಪಿಗೆ 20 ವರ್ಷ ಜೈಲು ಶಿಕ್ಷೆ:

ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 5ನೇ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಕೆ.ಆರ್‌. ಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ರಾಮಮೂರ್ತಿನಗರದ ಚಲುವಯ್ಯ ರಸ್ತೆಯ ನಿವಾಸಿ 30 ವರ್ಷದ ಗಣೇಶ್‌ ಶಿಕ್ಷೆಗೆ ಒಳಗಾದ ಆರೋಪಿ. ಈತ ಶಾಲಾ ರಜಾದಿನಗಳಲ್ಲಿ ಬಾಲಕಿ ಮನೆ ಬಂದು ಪದೇ ಪದೇ ಲೈಂಗಿಕ ಅತ್ಯಾಚಾರ ಎಸಗಿದ್ದ. ಅಲ್ಲದೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ಈ ಸಂಬಂಧ ಕೆ ಆರ್‌ ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಪೂರ್ಣಗೊಳಿಸಿದ ಇನ್‌ ಸ್ಪೆಕ್ಟರ್‌ ಎಸ್. ಆರ್.‌ ಮಂಜುನಾಥ್‌ ಅವರು ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ವಕೀಲ ಅನುರೇವು ಅವರು ಸಮರ್ಥವಾಗಿ ವಾದ ಮಂಡಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾದೀಶರಾದ ಎನ್.ನರಸಮ್ಮ ಅವರು ಅಪರಾಧಿಗೆ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಬಾಲಕಿಗೆ 10 ಲಕ್ಷ ರೂ. ಪರಿಹಾರ ನೀಡುವಂತೆಯೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ಹೊರಡಿಸಿದ್ದಾರೆ.

More articles

Latest article

Most read