ಈ ಎರಡೂ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್; ಬೆಂಗಳೂರಿನಲ್ಲಿ ಇಂದು ನಾಳೆ ಮೋಡ ಕವಿದ ವಾತಾವರಣ

Most read

ಬೆಂಗಳೂರು: ಮಲೆನಾಡು ಭಾಗದಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಮುನ್ಸೂಚನೆ ಕಂಡು ಬಂದಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈ ಎರಡೂ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲೂ ಮೋಡ ಕವಿದ ವಾತಾವರಣವಿದ್ದು, ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಯ ಒಂದೆರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ಹಲವು ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಮುಂದುವರಿದಿದೆ.


ಬೆಂಗಳೂರು ಮಹಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಶುಕ್ರವಾರ ಮೋಡ ಕವಿದ ವಾತಾವರಣ ಇರಲಿದೆ. ರಾಜಧಾನಿಯ ಕೆಲವು ಭಾಗಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶವು 25 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್ ನಷ್ಟು ಇರಲಿದೆ. ಶನಿವಾರವೂ ಇದೆ ವಾತಾವರಣ ಮುಂದುವರೆಲಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರಾವಳಿ ಕರ್ನಾಟಕದ ಮೂರೂ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಇತರೆ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.


ಶನಿವಾರ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಬಹುದು. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಗುರ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ.

More articles

Latest article