ಕಲಬುರಗಿ: 30 ಬೈಕ್ ಕಳ್ಳರ ಬಂಧನ, 105 ಬೈಕ್ ಜಪ್ತಿ

Most read

ಕಲಬುರಗಿ:ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 37 ಬೈಕ್ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿ 30 ಬೈಕ್ ಕಳ್ಳರನ್ನು ಬಂಧಿಸಲಗಿದೆ. ಅವರಿಂದ ರೂ. 54,55,613 ರೂ.ಮೌಲ್ಯದ 105 ಬೈಕ್‍ಗಳನ್ನು ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ.ತಿಳಿಸಿದ್ದಾರೆ.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಗೆ ಒಳಪಡುವ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಬೈಕ್ ಕಳ್ಳತನ ಪ್ರಕರಣಗಳ ಪತ್ತೆಗೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡ ರಚಿಸಲಾಗಿತ್ತು. ಈ ತಂಡಗಳು ತನಿಖೆ ನಡೆಸಿ ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 20, ಆರ್.ಜಿ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 8, ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 6, ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 9, ಎಂ.ಬಿ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 6, ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 5 ಮತ್ತು ಸಬ್-ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 28 ಬೈಕ್ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿ 30 ಬೈಕ್ ಕಳ್ಳರನ್ನು ಬಂಧಿಸಿ 54.55 ಲಕ್ಷ ರೂ.ಮೌಲ್ಯದ ವಿವಿಧ ಕಂಪನಿಯ 105 ಬೈಕ್‍ಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

More articles

Latest article