ಉತ್ತರಪ್ರದೇಶ ಮೆಡಿಕಲ್‌ ಕಾಲೇಜಿನಲ್ಲಿ ಅಗ್ನಿ ದುರಂತ; 10 ನವಜಾತ ಶಿಶುಗಳು ಸಾವು

Most read

ಅಲಹಾಬಾದ್: ಉತ್ತರ ಪ್ರದೇಶದ ಮಹಾರಾಣಿ ಝಾನ್ಸಿ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆಗಷ್ಟೇ ಜನಿಸಿದ  10 ನವಜಾತ ಶಿಶುಗಳು ಸಾವನ್ನಪ್ಪಿವೆ. ಇನ್ನೂ 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿವೆ ಎಂದು ತಿಳಿದ ಬಂದಿದೆ. ಈ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಕಳೆದ ರಾತ್ರಿ 10:45 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವಿನಾಶ್ ಕುಮಾರ್ ಹೇಳಿದ್ದಾರೆ.

ಶಾರ್ಟ್‌ ಸರ್ಕ್ಯೂಟ್‌ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಅಕ್ಸಿಜನ್‌ ಕಾನ್ಸಿಂಟ್ರೇಟರ್‌ ನಲ್ಲಿ ಶಾರ್ಟ್‌ ಸರ್ಕ್ಯೂಟ್‌ ಉಂಟಾಗಿದ್ದು ಆಮ್ಲಜನಕದ ಕಾರಣಕ್ಕೆ ಅತಿ ವೇಗವಾಗಿ ಬೆಂಕಿ ಹಬ್ಬಿದೆ.  ಇಲ್ಲಿ ಒಟ್ಟು 54 ಮಕ್ಕಳು ದಾಖಲಾಗಿದ್ದರು. 10 ಮಕ್ಕಳು ಸಾವನ್ನಪ್ಪಿದ್ದು 7 ಮಕ್ಕಳ ಗುರುತನ್ನು ಪತ್ತೆ ಮಾಡಲಾಗಿದೆ.  ಗುರುತು ಹಚ್ಚಲಾಗದಿರುವ ಮಕ್ಕಳ ಗುರುತು ಹಚ್ಚಲು ಮಕ್ಕಳ ಡಿಎನ್‌ಎ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಈಗಾಗಲೇ ತನಿಖೆಗೆ ಆದೇಶ ಹೊರಡಿಸಿದೆ. ಅಸ್ಪತ್ರೆಯಲ್ಲಿ ಸಾಕಷ್ಟು ಮುಂಜಾಗ್ರತಾ ಉಪಕರಣಗಳು ಇರಲಿಲ್ಲ ಎಂದು  ತಿಳಿದು ಬಂದಿದೆ. ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಬ್ರಿಜೇಶ್‌ ಪಾಠಕ್‌ ಸಮರ್ಪಕ ತನಿಖೆ ನಡೆಸಲಾಗುತ್ತದೆ.. ಸಂತ್ರಸ್ತರ ಕುಟುಂಬಗಳಿಗೆ ರೂ. 5 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ತಲಾ ರೂ. 50,000 ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಕಲೇದ ರಾತ್ರಿಯೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಅಧಿಕಾರಿಗಳ ಸಭೆ ನಡೆಸಿ ಸೂಕ್ತ ತನಿಖೆ ಮತ್ತು ಪರಿಹಾರ ನೀಡಲು ಸೂಚನೆ ನೀಡಿದ್ದಾರೆ.

More articles

Latest article