Saturday, November 16, 2024

ಸಚಿವ ಜಮೀರ್‌ ಗೆ ಲೋಕಾಯುಕ್ತ ನೋಟಿಸ್

Most read

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಸತಿ ಮತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟೀಸ್ ಜಾರಿಗೊಳಿಸಿದೆ. ಬರುವ ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್ಪಿ ನೋಟಿಸ್ ನೀಡಿದ್ದಾರೆ.


ಜಮೀರ್ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ಧೇಶನಾಲಯ (ಇ.ಡಿ) ದಾಳಿ ನಡೆಸಿತ್ತು. ನಂತರ ಸಚಿವ ಜಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿತ್ತು. ಅಕ್ರಮ ಗಳಿಕೆ ಸಂಬಂಧ ತನಿಖೆಗೆ ಇ.ಡಿ ಸೂಚಿಸಿತ್ತು. ಕಳೆದ ಎರಡು ವರ್ಷದಿಂದ ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಆಸ್ತಿ ಗಳಿಕೆ ಕುರಿತು ಈ ಹಿಂದೆ ದಾಖಲೆ ಸಲ್ಲಿಸಲು ಅವರಿಗೆ ನೋಟಿಸ್ ನೀಡಲಾಗಿತ್ತು. ಈಗ ಖುದ್ದು ಹಾಜರಾಗಿ ಹೇಳಿಕೆ ನೀಡಲು ನೋಟಿಸ್ ನೀಡಲಾಗಿದೆ.

More articles

Latest article