ಮಣಿಪುರದಲ್ಲಿ ಹೆಚ್ಚಿದ ಗಲಭೆ; 50 CAPF ತುಕಡಿ ರವಾನೆ

Most read

ನವದೆಹಲಿ: ಸಂಘರ್ಷ ಪೀಡಿತ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು 5000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ಒಳಗೊಂಡ 50 ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (CAPF) ತುಕಡಿಗಳ್ನು ಕಳುಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಕಣಿವೆ ರಾಜ್ಯದ ಜಿರೀಬಾಮ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ನವೆಂಬರ್ 12ರಂದು ಗೃಹ ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ 20 ಹೆಚ್ಚುವರಿ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (CAPF) ತುಕಡಿಗಳನ್ನು ರಾಜ್ಯಕ್ಕೆ ಕಳುಹಿಸಿತ್ತು. ಈ ಸಿಎಪಿಎಫ್ ತುಕಡಿಗಳಲ್ಲಿ 15 ಸಿಆರ್ಪಿಎಫ್ ತುಕಡಿಗಳು ಮತ್ತು 5 ಗಡಿ ಭದ್ರತಾ ಪಡೆ (BSF) ತುಕಡಿಗಳು ಸೇರಿದ್ದವು.

ಈ ವಾರದೊಳಗೆ ಹೆಚ್ಚುವರಿ 50 ಸಿಎಪಿಎಫ್ ತುಕಡಿಗಳನ್ನು ಮಣಿಪುರಕ್ಕೆ ಕಳುಹಿಸುವಂತೆ ಆದೇಶ ನೀಡಲಾಗಿದೆ. ಇವುಗಳಲ್ಲಿ 35 ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ತುಕಡಿಗಳು ಹಾಗೂ 15 ಗಡಿ ಭದ್ರತಾ ಪಡೆ (BSF) ತುಕಡಿಗಳು ಇರಲಿವೆ ಎಂದು ಮೂಲಗಳು ತಿಳಿಸಿವೆ.

ಮಣಿಪುರದಲ್ಲಿ ಕಳೆದ ವರ್ಷದ ಮೇ ತಿಂಗಳಲ್ಲಿ ಶುರುವಾದ ಜನಾಂಗೀಯ ಹಿಂಸಾಚಾರದಿಂದ ಇದುವರೆಗೂ 200ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಈ ಬೆಳವಣಿಗೆ ನಂತರ ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಿಸಲು ಈವರೆಗೆ ಒಟ್ಟು ಸಿಎಪಿಎಫ್ಗಳ 218 ತುಕಡಿಗಳನ್ನು ಕೇಂದ್ರ ಸರ್ಕಾರ ನಿಯೋಜಿಸಿದೆ.

More articles

Latest article