ಬೆಂಗಳೂರು: ಯಾವುದೇ ಕಾರಣಕ್ಕೂ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು. ಒಂದು ವೇಳೆ ಒಂದಿಬ್ಬರು ಅನರ್ಹರು ಸೇರಿಕೊಂಡರೂ ಚಿಂತೆಯಿಲ್ಲ, ಆದರೆ ಅರ್ಹರಿಗೆ ಮಾತ್ರ ತಪ್ಪಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯ ಭಾರತ್ ಜೋಡೊ ಭವನದಲ್ಲಿ ಮಂಗಳವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಿಪಿಎಲ್, ಎಪಿಎಲ್ ಅಂದರೇನು ? ಬಡತನ ರೇಖೆಗಿಂತ ಕೆಳಗಿರುವವರು, ಮೇಲಿರುವವರು ಎಂದು ಅರ್ಥ. ಬಡವರಿಗೆ ಬಿಪಿಎಲ್ ಕಾರ್ಡ್ ಬಿಟ್ಟು ಹೋಗಬಾರದು’ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಅವರಿಗೆ ಸೂಚಿಸಿದ ಮುಖ್ಯಮಂತ್ರಿಗಳು, ಶ್ರೀಮಂತರು, ಆದಾಯ ತೆರಿಗೆ ಕಟ್ಟುವವರು, ಸರ್ಕಾರಿ ನೌಕರರು ಬಿಪಿಎಲ್ ಗೆ ಅರ್ಹರಲ್ಲ. ಅವರಿಗೆ ಎಪಿಎಲ್ ಕೊಡಿ, ಅದಕ್ಕೂ ಕೆಲ ಸವಲತ್ತುಗಳಿವೆ ಎಂದರು.
ಯಾರಾದರೂ ಬಿಪಿಎಲ್ ನವರು ಇದ್ದರೆ ಅರ್ಜಿ ಹಾಕಲಿ. ಅಂತಹವರಿಗೆ ಮತ್ತೆ ಬಿಪಿಎಲ್ ಕಾಡ್ ಕೊಡುತ್ತೇವೆ. ಈ ವಿಚಾರದಲ್ಲಿ ಬಿಜೆಪಿಯವರಿಂದ ಪಾಠ ಕಲಿಯಬೇಕಾದ ಅವಶ್ಯಕತೆ ಇಲ್ಲ ಎಂದು ಹೇಳಿದರು.