ಬೆಂಗಳೂರು: ಡಿಸೆಂಬರ್ 9 ರಿಂದ 20ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನ ನಡೆಸಲು ರಾಜ್ಯಪಾಲರು ಸಮ್ಮತಿ ಸೂಚಿಸಿದ್ದಾರೆ.
ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ದಿನಾಂಕವನ್ನು ನಿಗದಿ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಿತ್ತು. ಈ ಬಾರಿಯೂ ಅಧಿವೇಶನದಲ್ಲಿ ಕಾವೇರಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆಗಳಿವೆ. ಸರ್ಕಾರದ ಅನೇಕ ಹಗರಣಗಳನ್ನು ಬಿಜೆಪಿ ಪ್ರಸ್ತಾಪಿಸಲಿದೆ. ಸರ್ಕಾರವೂ ತಕ್ಕ ತಿರುಗೇಟು ನೀಡಲು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ.