ಮಂಡ್ಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ ರು ಚ ಆಯ್ಕೆ?

ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ ರು ಚನ್ನಬಸಪ್ಪ ಅವರು ಆಯ್ಕೆಯಾಗುವ ಸಾಧ್ಯತೆಗಳಿವೆ.

ಕನ್ನಡ ಸಾಹಿತ್ಯ ಪರಿಷತ್ತಿನ ಬಲ್ಲ ಮೂಲಗಳು ಇವರ ಆಯ್ಕೆಯನ್ನು ಖಚಿತಪಡಿಸಿವೆ.

ಗೊ.ರು. ಚ. ಅವರು ಈ ಹಿಂದೆ 1992 ರಿಂದ 1995 ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕೊಪ್ಪಳ (1993), ಮಂಡ್ಯ (1994), ಮತ್ತು ಮುಧೋಳದಲ್ಲಿ (1995)ರಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ.

ಜಾನಪದ ವಿದ್ವಾಂಸರಾದ ಇವರು ಕರ್ನಾಟಕ ಪ್ರಗತಿಪಥ, ಸಾಕ್ಷಿಕಲ್ಲು, ಬಾಗೂರು ನಾಗಮ್ಮ, ಗ್ರಾಮಗೀತೆಗಳು, ಕರ್ನಾಟಕ ಜನಪದ ಕಲೆಗಳು, ಹೊನ್ನ ಬಿತ್ತೇವು ನೆಲಕೆಲ್ಲ ಮೊದಲಾದ ಕೃತಿಗಳನ್ನು ರಚಿಸಿದ್ದಾರೆ

More articles

Latest article

Most read