ಬೆಂಗಳೂರು: ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಿವೇಣಿ ಚಿತ್ರಮಂದಿರದ ಬಳಿ ರಾತ್ರಿ ವೇಳೆ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿದೆ.
ಕೊಲೆಯಾದ ವ್ಯಕ್ತಿಯನ್ನು ನಾಗೇಶ್ ಎಂದು ಗುರುತಿಸಲಾಗಿದೆಯಾದರೂ ನಿಖರವಾದ ವಿಳಾಸ ಪತ್ತೆಯಾಗಿಲ್ಲ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ವ್ಯಕ್ತಿ ಕೂಲಿ ಕೆಲಸ ಮಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅವರ ಬಳಿ ಯಾವುದೇ ಗುರುತಿನ ಚೀಟಿ ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ತ್ರಿವೇಣಿ ಚಿತ್ರಮಂದಿರದ ಬಳಿ ಏಳು ಮಂದಿ ಮಧ್ಯೆ ಗಲಾಟೆ ನಡೆದಿದೆ. ಆಗ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.